ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ದಿನಾಂಕ ನಿಗದಿಯಾಗಿದೆ. ಗ್ರೇಟರ್ ಬೆಂಗಳೂರು(ಜಿಬಿಎ) ವ್ಯಾಪ್ತಿಯಲ್ಲಿ ಸಮೀಕ್ಷೆಗೆ ದಿನಾಂಕ ನಿಗದಿಪಡಿಸಲಾಗಿದೆ.
ಜಿಬಿಎ ವ್ಯಾಪ್ತಿಯಲ್ಲಿ ಅಕ್ಟೋಬರ್ 3ರಿಂದ ಸಮೀಕ್ಷೆ ಆರಂಭವಾಗಲಿದೆ. ಸದ್ಯ ಗಣತಿದಾರರಿಗೆ ಅಧಿಕಾರಿಗಳು ತರಬೇತಿ ನೀಡುತ್ತಿದ್ದಾರೆ. ಸಮೀಕ್ಷೆಗೆ ಗೈರು ಹಾಜರಾದಲ್ಲಿ ಜಿಬಿಎ ಮುಖ್ಯ ಆಯುಕ್ತರು ಕ್ರಮ ಕೈಗೊಳ್ಳಲಿದ್ದಾರೆ.
ರಾಜ್ಯದಲ್ಲಿ ಸೆಪ್ಟೆಂಬರ್ 22 ರಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆರಂಭವಾಗಿದ್ದರೂ ಕಾರಣಾಂತರದಿಂದ ಜಿಬಿಎ ವ್ಯಾಪ್ತಿಯಲ್ಲಿ ಆರಂಭವಾಗಿರಲಿಲ್ಲ. ಇದೀಗ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದ್ದು ಅಕ್ಟೋಬರ್ 3ರಿಂದ ಜಿಬಿಎ ವ್ಯಾಪ್ತಿಯಲ್ಲಿ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ ಆರಂಭಿಸಲಾಗುವುದು ಎನ್ನಲಾಗಿದೆ.