ಬೆಂಗಳೂರು: ರಾಜ್ಯದ 222 ಗ್ರಾಮ ಪಂಚಾಯಿತಿಗಳ 260 ಸ್ಥಾನಗಳಿಗೆ ಉಪಚುನಾವಣೆ ನಡೆಸಲು ದಿನಾಂಕ ಘೋಷಣೆ ಮಾಡಲಾಗಿದೆ.
ಏಪ್ರಿಲ್ 22 ರಂದು ರಾಜ್ಯ ಚುನಾವಣಾ ಆಯೋಗದಿಂದ ಅಧಿಸೂಚನೆ ಪ್ರಕಟಿಸಲಾಗುವುದು. ಮೇ 11ರಂದು ಮತದಾನ, ಮೇ 14ರಂದು ಫಲಿತಾಂಶ ಪ್ರಕಟವಾಗಲಿದೆ.
ವಿವಿಧ ಕಾರಣಗಳಿಂದಾಗಿ ತೆರವಾಗಿರುವ 222 ಗ್ರಾಮ ಪಂಚಾಯಿತಿಗಳ 260 ಸ್ಥಾನಗಳಿಗೆ ಉಪಚುನಾವಣೆ ನಡೆಸಲಾಗುವುದು. ಇದಕ್ಕಾಗಿ ಚುನಾವಣಾ ಆಯೋಗದಿಂದ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಮೇ 11ರಂದು ಮತದಾನ, ಮೇ 14ರಂದು ಫಲಿತಾಂಶ ಪ್ರಕಟಿಸಲಾಗುವುದು. ಇದಕ್ಕೆ ಪೂರ್ವಭಾವಿಯಾಗಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ಏಪ್ರಿಲ್ 22ರಂದು ಅಧಿಸೂಚನೆ ಹೊರಡಿಸಲಾಗುವುದು ಎನ್ನಲಾಗಿದೆ.