HomeLatest NewsBREAKING: ದಾವಣಗೆರೆಯಲ್ಲಿ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಕೇಸ್: ಕಾಂಗ್ರೆಸ್ ಮುಖಂಡನ ಮತ್ತಿಬ್ಬರು ಪುತ್ರರು ಅರೆಸ್ಟ್

BREAKING: ದಾವಣಗೆರೆಯಲ್ಲಿ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಕೇಸ್: ಕಾಂಗ್ರೆಸ್ ಮುಖಂಡನ ಮತ್ತಿಬ್ಬರು ಪುತ್ರರು ಅರೆಸ್ಟ್

ದಾವಣಗೆರೆ: ದಾವಣಗೆರೆಯಲ್ಲಿ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡನ ಇನ್ನಿಬ್ಬರು ಪುತ್ರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಅಯೂಬ್ ಪುತ್ರರಾದ ಹುಸೇನ್(26), ಹಮ್ಜಾ(24) ಅವರನ್ನು ವಶಕ್ಕೆ ಪಡೆಯಲಾಗಿದೆ. ಜನವರಿ 31 ರಂದು ಪೊಲೀಸರ ಮೇಲೆ ಆರೋಪಿಗಳು ಹಲ್ಲೆ ಮಾಡಿದ್ದರು. ದಾವಣಗೆರೆಯ ಬಡಾವಣೆ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಗಾಯತ್ರಿ ಕಾನ್ಸ್ಟೇಬಲ್ ಗಳಾದ ಹರೀಶ್ ಮತ್ತು ಕೆಂಚಪ್ಪ ಅವರ ಮೇಲೆ ಹಲ್ಲೆ ಮಾಡಿದ್ದರು. ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿಗಳು ತಲೆಮರೆಸಿಕೊಂಡಿದ್ದರು. ಇದೀಗ ಪ್ರಕರಣ ಸಂಬಂಧ ಮತ್ತಿಬ್ಬರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular