ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ಕೂಡ ಸಿಎಂ ಸ್ಥಾನದ ಆಕಾಂಕ್ಷಿ.! ಇದರಲ್ಲಿ ತಪ್ಪೇನು ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ರಾಷ್ಟ್ರೀಯ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು ‘5 ವರ್ಷ ನಾನೇ ಸಿಎಂ ಆಗಿ ಮುಂದುವರೆಯುತ್ತೇನೆ. ಡಿಸಿಎಂ ಡಿಕೆ ಶಿವಕುಮಾರ್ ಕೂಡ ಸಿಎಂ ಸ್ಥಾನದ ಆಕಾಂಕ್ಷಿ.
ಹೆಚ್ಚಿನ ಶಾಸಕರೇನು ಡಿಕೆಶಿ ಬೆಂಬಲಿಸಿಲ್ಲ. ಅಧಿಕಾರ ಹಂಚಿಕೆ ಬಗ್ಗೆ ಹೈಕಮಾಂಡ್ ತೀರ್ಮಾನಿಸಿಲ್ಲ. ನಾನಾಗಾಗಲಿ ಡಿಕೆಶಿ ಆಗಲಿ ಹೈಕಮಾಂಡ್ ನಿರ್ಧಾರಕ್ಕೆ ಬದ್ದರಾಗಿರಬೇಕು ಎಂದರು. ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದರು.