BREAKING: ಡಿಸಿಎಂ ಡಿ.ಕೆ. ಶಿವಕುಮಾರ್ ಗೆ ಡೆಂಘೀ ಜ್ವರ

ಚನ್ನಪಟ್ಟಣ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಡೆಂಘೀ ಜ್ವರ ಕಾಣಿಸಿಕೊಂಡಿದೆ. ಡಿ.ಕೆ. ಶಿವಕುಮಾರ್ ಅವರೇ ಈ ವಿಷಯವನ್ನು ತಿಳಿಸಿದ್ದಾರೆ.

ಚನ್ನಪಟ್ಟಣ ತಾಲೂಕಿನ ಹೊಂಗನೂರು ಗ್ರಾಮದಲ್ಲಿ ಕಣ್ವ ಫೌಂಡೇಶನ್ ವತಿಯಿಂದ ನಿರ್ಮಿಸಿರುವ ಶಾಲಾ ಕಟ್ಟಡ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಶಾಲಾ ಉದ್ಘಾಟನಾ ಕಾರ್ಯಕ್ರಮಕ್ಕೆ ಬರುವ ಪರಿಸ್ಥಿತಿಯಲ್ಲಿ ನಾನು ಇರಲಿಲ್ಲ. ಕಳೆದ ಐದಾರು ದಿನದಿಂದ ಡೆಂಘೀ ಜ್ವರ ಬಂದಿದೆ. ಈ ಕಾರಣಕ್ಕೆ ಸ್ವಲ್ಪ ಆಯಾಸ ಆಗುತ್ತಿದೆ. ಆದರೆ, ಬರಲೇಬೇಕು ಎಂದು ಆಹ್ವಾನಿಸಿದ ಹಿನ್ನೆಲೆಯಲ್ಲಿ ಅಭಿಮಾನದಿಂದ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದಾಗಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read