ಬೆಂಗಳೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರು ನಡಿಗೆ ಕಾರ್ಯಕ್ರಮದಲ್ಲಿ ಹೈಡ್ರಾಮಾ ನಡೆದಿದೆ. ಮತ್ತಿಕೆರೆಯ ಜೆಪಿ ಪಾರ್ಕ್ ನಲ್ಲಿ ಶಾಸಕ ಮುನಿರತ್ನ ಪ್ರತಿಭಟನೆ ನಡೆಸಿದ್ದಾರೆ.
ಸ್ಥಳೀಯ ಶಾಸಕನಾದ ನನಗೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಿಲ್ಲ. ನನ್ನ ಮೇಲೆ ಸಚಿವರು ಕೈ ಎತ್ತಿ ಹೊಡೆಯುವ ಯತ್ನ ನಡೆದಿದೆ. ಸ್ಥಳೀಯ ಶಾಸಕನಾದ ನನ್ನನ್ನು ಕರೆದಿಲ್ಲ. ವೇದಿಕೆಗೆ ಹೋಗಲು ಹೋದಾಗ ಪೊಲೀಸರು ನನ್ನನ್ನು ತಡೆದರು. ನನ್ನ ಮೇಲೆ ಹಲ್ಲೆಯಾಗಿದೆ ಎಂದು ಮುನಿರತ್ನ ಹೇಳಿದ್ದಾರೆ.
ನನ್ನನ್ನು ಹೊಡೆಯಲು ಕನಕಪುರ, ಚನ್ನಪಟ್ಟಣದಿಂದ ಜನರನ್ನು ಕರೆತಂದಿದ್ದಾರೆ. ನನ್ನ ಮೇಲೆ ರೌಡಿಸಂ ನಡೆಸುತ್ತಿದ್ದಾರೆ. ನನ್ನನ್ನು ಅವಮಾನಿಸಿದ್ದಾರೆ. ಇದು ಸರ್ಕಾರಿ ಕಾರ್ಯಕ್ರಮವೋ ಕಾಂಗ್ರೆಸ್ ಕಾರ್ಯಕರ್ಮವೋ ಎಂದು ಪ್ರಶ್ನಿಸಿದ್ದಾರೆ.
ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ ಮುನಿರತ್ನ, ಸೋತ ಅಭ್ಯರ್ಥಿಯನ್ನು ಕೂರಿಸಿಕೊಂಡು ಕಾರ್ಯಕ್ರಮ ಮಾಡಿದ್ದಾರೆ. ಸಂಸದರನ್ನು ಕೂಡ ಕಾರ್ಯಕ್ರಮಕ್ಕೆ ಆಹ್ವಾನಿಸಿಲ್ಲ ಎಂದು ದೂರಿದ್ದಾರೆ.
ನನಗೆ ಮೊಮ್ಮಕ್ಕಳಿದ್ದಾರೆ. ಇವರಿಂದ ದೂರವಾದ ನಂತರ ರೇಪ್ ಕೇಸ್ ಹಾಕಿಸಿದ್ದಾರೆ. ದಲಿತರ ಮೇಲೆ ದೌರ್ಜನ್ಯ ಕೇಸ್ ಹಾಕಿಸಿದ್ದಾರೆ. ಸರ್ಕಾರಿ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು, ಚುನಾವಣೆಯಲ್ಲಿ ಸೋತ ಅಭ್ಯರ್ಥಿ ಕೂರಿಸಿದ್ದಾರೆ. ಸ್ಥಳೀಯ ಶಾಸಕನಾದ ನನಗೆ ಆಹ್ವಾನ ನೀಡದೇ ಕ್ಷೇತ್ರದ ಜನತೆಗೆ ಅವಮಾನ ಮಾಡಿದ್ದಾರೆ ಎಂದು ಮುನಿರತ್ನ ಆರೋಪಿಸಿದ್ದಾರೆ.