ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು ಬೆಳಗ್ಗೆ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಶಿವಾನಂದ ಸರ್ಕಲ್ ಬಳಿಯ ಸರ್ಕಾರಿ ನಿವಾಸದಲ್ಲಿ ಅವರು ಇಂದು ಬೆಳಗ್ಗೆ 10:30ಕ್ಕೆ ಸುದ್ದಿಗೋಷ್ಠಿ ನಡೆಸಲಿದ್ದಾರೆ.
ದಾವೋಸ್ ಭೇಟಿ, ಮನರೇಗಾ ಹೋರಾಟ, ಸದನದಲ್ಲಿ ಆದ ಘಟನೆ, ರಾಜ್ಯಪಾಲರ ನಡೆ, ಸ್ಥಳೀಯ ಸಂಸ್ಥೆಗಳ ಚುನಾವಣೆ, ಸದ್ಯದ ರಾಜಕೀಯ ವಿಷಯ ಬಗ್ಗೆ ಸುದ್ದಿಗೋಷ್ಠಿ ನಡೆಸುವ ಸಾಧ್ಯತೆ ಇದೆ. ನಾಯಕತ್ವದ ಬದಲಾವಣೆ ವಿಚಾರವಾಗಿ ಹೇಳಿಕೆಗಳು, ಗೊಂದಲಕ್ಕೆ ತೆರೆ ಎಳೆಯುವ ಸಾಧ್ಯತೆ ಇದೆ.

