HomeLatest NewsBREAKING: ಬೆಂಗಳೂರಿಗೆ ಬಂದ ಮಂಜುನಾಥ್, ಭರತ್ ಮೃತದೇಹ: ಆಂಬುಲೆನ್ಸ್ ನಲ್ಲಿ ಸ್ವಗೃಹಕ್ಕೆ ರವಾನೆ | Pahalgam...

BREAKING: ಬೆಂಗಳೂರಿಗೆ ಬಂದ ಮಂಜುನಾಥ್, ಭರತ್ ಮೃತದೇಹ: ಆಂಬುಲೆನ್ಸ್ ನಲ್ಲಿ ಸ್ವಗೃಹಕ್ಕೆ ರವಾನೆ | Pahalgam Terrorist Attack

ಬೆಂಗಳೂರು: ಪಹಲ್ಗಾಮ್ ನಲ್ಲಿ ಉಗ್ರರ ದಾಳಿಯಲ್ಲಿ ಮೃತಪಟ್ಟ ಕರ್ನಾಟಕದ ಮಂಜುನಾಥ್ ಮತ್ತು ಭರತ್ ಭೂಷಣ್ ಅವರ ಮೃತದೇಹಗಳನ್ನು ದೆಹಲಿಯಿಂದ ಬೆಂಗಳೂರುಗೆ ವಿಮಾನದ ಮೂಲಕ ತರಲಾಗಿದೆ.

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮೃತದೇಹಗಳನ್ನ ತಂದು ಅಲ್ಲಿಂದ ಆಂಬುಲೆನ್ಸ್ ನಲ್ಲಿ ಸ್ವಗೃಹಕ್ಕೆ ಕೊಂಡೊಯ್ಯಲಾಗಿದೆ.

ಶಿವಮೊಗ್ಗದ ಮಂಜುನಾಥ್ ಮೃತದೇಹವನ್ನು ಆಂಬುಲೆನ್ಸ್ ಮೂಲಕ ಬೆಂಗಳೂರಿನಿಂದ ತುಮಕೂರು, ಚಿತ್ರದುರ್ಗ, ಚನ್ನಗಿರಿ ಮಾರ್ಗವಾಗಿ ಶಿವಮೊಗ್ಗಕ್ಕೆ ತೆಗೆದುಕೊಂಡು ಹೋಗಲಾಗುತ್ತಿದೆ. ಬೆಳಗ್ಗೆ 9 ಗಂಟೆಗೆ ಮಂಜುನಾಥ್ ನಿವಾಸದಲ್ಲಿ ಅಂತಿಮ ವಿಧಿ ವಿಧಾನಗಳು ನಡೆಯಲಿದ್ದು, ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರಿನ ಮತ್ತಿಕೆರೆಯ ನಿವಾಸಕ್ಕೆ ಭರತ್ ಭೂಷಣ್ ಮೃತದೇಹ ಕೊಂಡೊಯ್ದು ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬ್ಯಾರಿಕೇಡ್ ಅಳವಡಿಸಿ ಪೊಲೀಸರು ದರ್ಶನಕ್ಕೆ ವ್ಯವಸ್ಥೆ ಮಾಡಿದ್ದು, ಮನೆ, ಸುತ್ತಲಿನ ರಸ್ತೆಯ ಬಳಿ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular