BREAKING : ನಕ್ಸಲ್ ನಾಯಕ ‘ವಿಕ್ರಂಗೌಡ’ ಮೃತದೇಹ ಕುಟುಂಬಕ್ಕೆ ಹಸ್ತಾಂತರ, ಇಂದು ಮಧ್ಯಾಹ್ನ 2 ಗಂಟೆಗೆ ಅಂತ್ಯಸಂಸ್ಕಾರ.!

ಹೆಬ್ರಿ :   ಗುಂಡೇಟಿನಲ್ಲಿ ಮೃತಪಟ್ಟ ನಕ್ಸಲ್ ನಾಯಕ ‘ವಿಕ್ರಂಗೌಡ’ ಮೃತದೇಹ ಕುಟುಂಬಕ್ಕೆ ಹಸ್ತಾಂತರ ಮಾಡಲಾಗಿದ್ದು, ಇಂದು ಮಧ್ಯಾಹ್ನ 2 ಗಂಟೆಗೆ ಅಂತ್ಯಸಂಸ್ಕಾರ ನಡೆಯಲಿದೆ ಎಂದು ತಿಳಿದು ಬಂದಿದೆ.ಈ ಹಿನ್ನೆಲೆ ಹೆಬ್ರಿಕೊಡ್ಲು ಗ್ರಾಮದತ್ತ ಜನರು ಧಾವಿಸುತ್ತಿದ್ದಾರೆ. 

ಉಡುಪಿ ಜಿಲ್ಲೆ ಹೆಬ್ರಿ ತಾಲೂಕಿನ ಕಬ್ಬಿನಾಲೆಯ ಅರಣ್ಯ ಪ್ರದೇಶದಲ್ಲಿ ನಕ್ಸಲ್ ನಿಗ್ರಹದಳ(ANF) ನಡೆಸಿದ ಎನ್ಕೌಂಟರ್ ನಲ್ಲಿ ಕಬ್ಬಿನಾಲೆ ಮೂಲದ ನಕ್ಸಲ್ ನಾಯಕ ವಿಕ್ರಂ ಗೌಡ ಸಾವನ್ನಪ್ಪಿದ್ದರು.ಅರಣ್ಯ ಪ್ರದೇಶದಲ್ಲಿ ಎಎನ್ಎಫ್ ಮತ್ತು ನಕ್ಸಲರ ತಂಡಗಳು ಮುಖಾಮುಖಿಯಾಗಿದ್ದು, ಈ ವೇಳೆ ನೇತ್ರಾವತಿ ದಳದ ನಕ್ಸಲ್ ನಾಯಕ ವಿಕ್ರಂ ಗೌಡರ ಎನ್ ಕೌಂಟರ್ ಮಾಡಲಾಗಿದೆ. ಹೆಬ್ರಿ ತಾಲೂಕಿನಲ್ಲಿ ನಕ್ಸಲ್ ಚಟುವಟಿಕೆ ಹಿನ್ನಲೆ ಕೂಂಬಿಂಗ್ ಕಾರ್ಯಾಚರಣೆ ಆರಂಭಿಸಿದ್ದ ಎಎನ್ಎಫ್ ತಂಡಕ್ಕೆ ನಕ್ಸಲರ ತಂಡ ಮುಖಾಮುಖಿಯಾಗಿದೆ. ಈ ವೇಳೆ ನಕ್ಸಲ್ ಮುಖಂಡನ ಮೇಲೆ ಎಎನ್ಎಫ್ ಪೊಲೀಸರು ಫೈರಿಂಗ್ ಮಾಡಿದ್ದು, ಉಳಿದ ಮೂವರು ಪರಾರಿಯಾಗಿದ್ದಾರೆ. ಫೈರಿಂಗ್ ನಲ್ಲಿ ಕಬ್ಬಿನಾಲೆ ಮೂಲದ ನಕ್ಸಲ್ ನಾಯಕ ವಿಕ್ರಂ ಗೌಡನನ್ನು ಹತ್ಯೆ ಮಾಡಲಾಗಿದೆ.

ವಿಕ್ರಂ ಗೌಡ ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕನಾಗಿದ್ದು, ಈತನ ತಲೆಗೆ 10 ಲಕ್ಷ ರೂಪಾಯಿ ಬಹುಮಾನ ಘೋಷಿಸಲಾಗಿತ್ತು. ಕರ್ನಾಟಕ, ಕೇರಳ, ತಮಿಳುನಾಡು ಪೊಲೀಸರಿಗೆ ಈತ ಬೇಕಾಗಿದ್ದ. ವಿಕ್ರಂ ಗೌಡನ ನಕ್ಸಲ್ ಚಟುವಟಿಕೆ ಸಂಬಂಧ ಹಲವು ಕೆಲಸಗಳು ದಾಖಲಾಗಿದ್ದವು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read