ನವದೆಹಲಿ: ದೆಹಲಿ ಕಾರ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಯುಎಪಿಎ ಪ್ರಕರಣ ದಾಖಲಿಸಿದ್ದು, ವಾಹನ ಸ್ಫೋಟದ ಬಗ್ಗೆ ವ್ಯಾಪಕ ತನಿಖೆ ಕೈಗೊಳ್ಳಲಾಗಿದೆ.
ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ಕಾನೂನುಬಾಹಿರ ಚಟುವಟಿಕೆಗಳು(ತಡೆಗಟ್ಟುವಿಕೆ) ಕಾಯ್ದೆ(ಯುಎಪಿಎ) ಮತ್ತು ಬಿಎನ್‌ಎಸ್‌ನ ವಿವಿಧ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ ಭಾರತದ ಪ್ರಾಥಮಿಕ ಭಯೋತ್ಪಾದನಾ ನಿಗ್ರಹ ಕಾನೂನು. ಇದು ಸರ್ಕಾರಕ್ಕೆ ಸಂಘಟನೆಗಳನ್ನು ನಿಷೇಧಿಸಲು ಮತ್ತು ವ್ಯಕ್ತಿಗಳನ್ನು ಭಯೋತ್ಪಾದಕರು ಎಂದು ಹೆಸರಿಸಲು ಅವಕಾಶ ನೀಡುತ್ತದೆ.
ಭಯೋತ್ಪಾದನೆ, ಪ್ರತ್ಯೇಕತಾವಾದ ಅಥವಾ ಭಾರತದ ಸಾರ್ವಭೌಮತ್ವ ಮತ್ತು ಭದ್ರತೆಗೆ ಧಕ್ಕೆ ತರುವ ಚಟುವಟಿಕೆಗಳಿಗೆ ಸಂಬಂಧಿಸಿದ ಕೃತ್ಯ ಎಂದು ಶಂಕಿಸಿದಾಗ ಈ ಕಾನೂನನ್ನು ಅನ್ವಯಿಸಲಾಗುತ್ತದೆ. ಯುಎಪಿಎ ಅಡಿಯಲ್ಲಿ, ಪೊಲೀಸರು ಮತ್ತು ಕೇಂದ್ರೀಯ ಸಂಸ್ಥೆಗಳು ತನಿಖೆ ಮತ್ತು ಕಸ್ಟಡಿಗೆ ಹೆಚ್ಚಿನ ಸಮಯವನ್ನು ಪಡೆಯುತ್ತವೆ ಮತ್ತು ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ವಹಿಸಿಕೊಳ್ಳಬಹುದು.
