ಬೆಂಗಳೂರು : ನಟ ಕಿಚ್ಚ ಸುದೀಪ್ ಬಗ್ಗೆ ಅವಹೇಳನಕಾರಿ ಕಮೆಂಟ್ ಮಾಡಿದ ಹಿನ್ನೆಲೆ ಬೆಂಗಳೂರು ಪೊಲೀಸ್ ಕಮಿಷನರ್ ಅವರಿಗೆ ದೂರು ಸಲ್ಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಅಖಿಲ ಕರ್ನಾಟಕ ಕಿಚ್ಚ ಸುದೀಪ್ ಸೇನಾ ಸಮಿತಿ ದೂರು ನೀಡಿದೆ. ಸುದೀಪ್ ಅವರ ಫೇಕ್ ಫೊಟೋ ಬಳಕೆ ಮಾಡಿ ಕಮೆಂಟ್ ಮಾಡಲಾಗಿದೆ ಎಂದು ದೂರು ನೀಡಲಾಗಿದೆ.
ಎಕ್ಸ್ ಖಾತೆಯಲ್ಲಿ ಕೆಟ್ಟದಾಗಿ ಕಮೆಂಟ್ ಮಾಡುವ ಮೂಲಕ ನಟನ ಘನತೆಗೆ ದಕ್ಕೆ ತಂದಿದ್ದಾರೆ. ಇದರಿಂದ ನೇರವಾಗಿ ಸ್ಟಾರ್ ವಾರ್ಗೆ ಕಾರಣವಾಗ್ತಿದೆ. ಈ ಹಿನ್ನಲೆ ಫೇಕ್ ಅಕೌಂಟ್ ಹೋಲ್ಡರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ನವೀನ್ ಗೌಡ ಎಂಬುವವರು ದೂರು ನೀಡಿದ್ದಾರೆ.