BREAKING : ‘ಹಿಂದೂ’ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ಕೇಸ್ ; ಸಚಿವ ಸತೀಶ್ ಜಾರಕಿಹೊಳಿಗೆ ಹೈಕೋರ್ಟ್ ನಿಂದ ಬಿಗ್ ರಿಲೀಫ್.!

ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸತೀಶ್ ಜಾರಕಿಹೊಳಿಗೆ ಹೈಕೋರ್ಟ್ ನಿಂದ ಬಿಗ್ ರಿಲೀಫ್ ಸಿಕ್ಕಿದೆ.

ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪಕ್ಕೆ ಸಂಬಂಧಿಸಿದಂತೆ 2022 ರಲ್ಲಿ ವಕೀಲ ದಿಲೀಪ್ ದೂರು ದಾಖಲಿಸಿದ್ದರು. ನಂತರ ಪ್ರಕರಣ ರದ್ದುಕೋರಿ ಸಚಿವ ಸತೀಶ್ ಜಾರಕಿಹೊಳಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ದಿಲೀಪ್ ದಾಖಲಿಸಿದ್ದ ದೂರು ರದ್ದುಗೊಳಿಸಿ ಆದೇಶಿಸಿದೆ.

ನಿಪ್ಪಾಣಿಯಲ್ಲಿ ಆಯೋಜಿಸಲಾಗಿದ್ದ ಬುದ್ಧ ಅಂಬೇಡ್ಕರ್ ಸಮಾವೇಶದಲ್ಲಿ ಶಾಸಕ ಸತೀಶ್ ಜಾರಕಿಹೊಳಿ ಭಾಗಿಯಾಗಿದ್ದರು. ಈ ವೇಳೆ ಅವರು ಹಿಂದೂ ಧರ್ಮದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರು.ಹಿಂದೂ ಎಂಬ ಪದ ಮೂಲತಃ ಭಾರತದ್ದಲ್ಲ, ಅದು ಪರ್ಷಿಯಾದಿಂದ ಬಂದ ಪದ . ಅಸಲಿಗೆ ಹಿಂದೂ ಎಂಬ ಪದಕ್ಕೆ ಪರ್ಷಿಯಾ ಭಾಷೆಯಲ್ಲಿ ಅಶ್ಲೀಲವಾದ ಅರ್ಥಗಳಿವೆ ಎಂದಿದ್ದರು. ಬೇಕಾದರೆ ಯಾರಾದರೂ ಗೂಗಲ್ ನಲ್ಲಿ ಸರ್ಚ್ ಮಾಡಿ ನೋಡಬಹುದು ಅಂತ ಅವರು ಹೇಳಿದ್ದರು.

ಸತೀಶ್ ಜಾರಕಿಹೊಳಿ ಹೇಳಿಕೆಗೆ ಬಿಜೆಪಿ ನಾಯಕರು ಹಾಗೂ ಹಿಂದೂ ಕಾರ್ಯಕರ್ತರು, ರಾಜ್ಯದ ಹಲವು ಕಡೆ ಸತೀಶ್ ಜಾರಕಿಹೊಳಿ ವಿರುದ್ಧ ದೂರು ನೀಡಿದ್ದರು. ವಕೀಲ ದಿಲೀಪ್ ಕುಮಾರ್ ಅವರು ಕೋರ್ಟ್ ಮೊರೆ ಹೋಗಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read