BREAKING : ಮಹಾರಾಷ್ಟ್ರದ ನೂತನ ಸಿಎಂ ಆಗಿ ‘ದೇವೇಂದ್ರ ಫಡ್ನವಿಸ್’ ಆಯ್ಕೆ, ನಾಳೆ ಪ್ರಮಾಣ ವಚನ ಸ್ವೀಕಾರ |Devendra fadnavis

ನವದೆಹಲಿ: ಬಿಜೆಪಿಯ ಹಿರಿಯ ಮುಖಂಡ ದೇವೇಂದ್ರ ಫಡ್ನವೀಸ್ ಅವರು ಗುರುವಾರ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮಹಾರಾಷ್ಟ್ರ ಶಾಸಕಾಂಗ ಪಕ್ಷದ ಸಭೆಗೂ ಮುನ್ನ ಬುಧವಾರ ಇಲ್ಲಿ ನಡೆದ ಬಿಜೆಪಿಯ ಕೋರ್ ಕಮಿಟಿ ಸಭೆಯಲ್ಲಿ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಇಂದು ಬುಧವಾರ ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಫಡ್ನವಿಡ್ ಹೆಸರು ಅಂತಿಮಗೊಳಿಸಲಾಗಿದೆ. ಏಕನಾಥ ಶಿಂಧೆ ಅವರು ಉಪಮುಖ್ಯಮಂತ್ರಿ ಹುದ್ದೆಗೆ ಒಪ್ಪಿಗೆ ಸೂಚಿಸಿದ್ದಾರೆ ಎಂದು ವರದಿ ತಿಳಿಸಿದೆ.

ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಮತ್ತು ಫಡ್ನವೀಸ್ ಉಪಸ್ಥಿತರಿದ್ದರು. ಬಿಜೆಪಿ ತನ್ನ ಮಹಾರಾಷ್ಟ್ರ ಶಾಸಕಾಂಗ ಪಕ್ಷದ ಸಭೆಗೆ ನಿರ್ಮಲಾ ಸೀತಾರಾಮನ್ ಮತ್ತು ರೂಪಾನಿ ಅವರನ್ನು ಕೇಂದ್ರ ವೀಕ್ಷಕರಾಗಿ ನೇಮಿಸಿದೆ. ಶಾಸಕಾಂಗ ಪಕ್ಷದ ಸಭೆಗೆ ಮುಂಚಿತವಾಗಿ, ಬಿಜೆಪಿ ನಾಯಕ ಸುಧೀರ್ ಮುಂಗಂತಿವಾರ್ ಅವರು ಮಹಾಯುತಿ ಪಾಲುದಾರರು ಬುಧವಾರ ಮಧ್ಯಾಹ್ನ 3.30 ಕ್ಕೆ ರಾಜ್ಯಪಾಲ ಸಿ.ಪಿ.ರಾಧಾಕೃಷ್ಣನ್ ಅವರನ್ನು ಭೇಟಿಯಾಗಿ ರಾಜ್ಯದಲ್ಲಿ ಸರ್ಕಾರ ರಚಿಸಲು ಹಕ್ಕು ಮಂಡಿಸಲಿದ್ದಾರೆ ಎಂದು ಹೇಳಿದರು. ನವೆಂಬರ್ 20 ರಂದು ನಡೆದ ಮಹಾರಾಷ್ಟ್ರ ಚುನಾವಣೆಯಲ್ಲಿ ಬಿಜೆಪಿ ಗಮನಾರ್ಹ ಯಶಸ್ಸನ್ನು ಸಾಧಿಸಿತು, ರಾಜ್ಯದ 288 ವಿಧಾನಸಭಾ ಸ್ಥಾನಗಳಲ್ಲಿ 132 ಸ್ಥಾನಗಳನ್ನು ಗೆದ್ದುಕೊಂಡಿತು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read