ಬೆಂಗಳೂರು : ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದ ಮೇರೆಗೆ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಇದೀಗ ಈ ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಿ ಡಿಜಿ, ಐಜಿಪಿ ಅಲೋಕ್ ಮೋಹನ್ ಆದೇಶ ಹೊರಡಿಸಿದ್ದಾರೆ.
ಮಾಜಿ ಸಿಎಂ ಯಡಿಯೂರಪ್ಪ ನನ್ನ 17 ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ದೂರು ನೀಡಿದ್ದಾರೆ. ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಕಳೆದ ಫೆಬ್ರವರಿಯಲ್ಲಿ ತನ್ನ 17 ವರ್ಷದ ಪುತ್ರಿ ಮೇಲೆ ಯಡಿಯೂರಪ್ಪ ಲೈಂಗಿಕ ದೌರ್ಜನ್ಯ ಎಸಗಿದ್ದಾಗಿ ಮಹಿಳೆಯೊಬ್ಬರು ಯಡಿಯೂರಪ್ಪ ವಿರುದ್ಧ ದೂರು ನೀಡಿದ್ದಾರೆ. ಹಲವು ಗಣ್ಯ ವ್ಯಕ್ತಿಗಳ ವಿರುದ್ಧ ಕೇಸ್ ಗಳನ್ನು ದಾಖಲಿಸಿದ್ದಾರೆ ಎನ್ನಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ.