ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯ ಧರ್ಮಸ್ಥಳದಲ್ಲಿ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೌಜನ್ಯ ಪರ ಹೋರಾಟಗಾರರಾದ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಜಯಂತ್, ವಿಠಲಗೌಡ ಅವರಿಗೆ ಎಸ್ಐಟಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೋಟಿಸ್ ನೀಡಿದ್ದು, ಇಂದು ಬೆಳಗ್ಗೆ 10:30ಕ್ಕೆ ವಿಚಾರಣೆಗೆ ಹಾಜರಾಗುವಂತೆ ಎಸ್ಐಟಿಯಿಂದ ನೋಟಿಸ್ ನೀಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯ ಎಸ್ಐಟಿ ಕಚೇರಿಯಲ್ಲಿ ವಿಚಾರಣೆ ನಡೆಯಲಿದೆ. ವಿಚಾರಣೆ ಹಿನ್ನೆಲೆಯಲ್ಲಿ ಮೂರು ದಿನ ಎಸ್ಐಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಬೆಳ್ತಂಗಡಿಯಲ್ಲೇ ಉಳಿದಿದ್ದಾರೆ. ಅವರ ಸಮ್ಮುಖದಲ್ಲಿಯೇ ನಾಲ್ವರ ವಿಚಾರಣೆ ನಡೆಸಲಾಗುವುದು.
ಇನ್ನು ಇಂದು ವಿಚಾರಣೆಗೆ ಬರುವಂತೆ ಸುಜಾತ ಭಟ್ ಅವರಿಗೂ ಎಸ್ಐಟಿಯಿಂದ ನೋಟಿಸ್ ನೀಡಲಾಗಿದೆ. ಧರ್ಮಸ್ಥಳ ಗ್ರಾಮದ ಬುರುಡೆ ಪ್ರಕರಣದಲ್ಲಿ ಸುಳ್ಳು ಕಥೆ ಸೃಷ್ಟಿಸಿ ರಾದ್ಧಾಂತಕ್ಕೆ ಕಾರಣವಾಗಿದ್ದ ಸುಜಾತ ಭಟ್ ವರಿಗೆ ನೋಟಿಸ್ ನೀಡಲಾಗಿದೆ. ಈ ಮೊದಲು ಸುಜಾತ ಅವರು ಹಲವು ಬಾರಿ ವಿಚಾರಣೆಗೆ ಹಾಜರಾಗಿದ್ದರು.
ಇಂದು ಎಸ್ಐಟಿ ಮುಖ್ಯಸ್ಥರ ಸಮ್ಮುಖದಲ್ಲಿ ನಡೆಯಲಿರುವ ಈ ಐವರ ವಿಚಾರಣೆ ವೇಳೆ ಮತ್ತಷ್ಟು ವಿಷಯಗಳು ಹೊರಬರುವ ಸಾಧ್ಯತೆ ಇದೆ.
