HomeLatest NewsBREAKING: ಧರ್ಮಸ್ಥಳ ಕೇಸ್: ಇಂದೂ ಯೂಟ್ಯೂಬರ್ ಸಮೀರ್ ವಿಚಾರಣೆ: ವಿಡಿಯೋ ಮಾಡಲು ಬಳಸಿದ ಮೊಬೈಲ್, ಕಂಪ್ಯೂಟರ್...

BREAKING: ಧರ್ಮಸ್ಥಳ ಕೇಸ್: ಇಂದೂ ಯೂಟ್ಯೂಬರ್ ಸಮೀರ್ ವಿಚಾರಣೆ: ವಿಡಿಯೋ ಮಾಡಲು ಬಳಸಿದ ಮೊಬೈಲ್, ಕಂಪ್ಯೂಟರ್ ವಶಕ್ಕೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಕ್ಷೇತ್ರವನ್ನು ಅವಹೇಳನ ಮಾಡಿದ ಆರೋಪದಡಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂಟ್ಯೂಬರ್ ಸಮೀರ್ ಎಂ.ಡಿ. ಭಾನುವಾರ ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರಾಗಿ ವಿವರಣೆ ನೀಡಿದ್ದಾರೆ.

ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ನ ನಾಗೇಶ್ ಕದ್ರಿ ವಿಚಾರಣೆ ನಡೆಸಿದ್ದು, ಆಗಸ್ಟ್ 25ರಂದು ಮತ್ತೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿ ದಾಖಲೆಗಳಿಗೆ ಸಹಿ ಪಡೆದು ಕಳಿಸಿದ್ದಾರೆ. ಸಮೀರ್ ವಿಡಿಯೋ ಮಾಡಲು ಬಳಸಿದ ಕಂಪ್ಯೂಟರ್ ಮತ್ತು ಮೊಬೈಲ್ ವಶಕ್ಕೆ ಪಡೆಯಲು ಪೊಲೀಸರು ಮುಂದಾಗಿದ್ದಾರೆ.

ಧರ್ಮಸ್ಥಳ ಕ್ಷೇತ್ರದ ಕುರಿತಂತೆ ಅಪಪ್ರಚಾರ ನಡೆಸಿದ ಆರೋಪದಡಿ ಸಮೀರ್ ವಿರುದ್ಧ ಪೊಲೀಸರು ಒಂದು ತಿಂಗಳ ಹಿಂದೆಯೇ ಸುಮೋಟೊ ಕೆಸ್ ದಾಖಲಿಸಿಕೊಂಡಿದ್ದಾರೆ. ವಿಚಾರಣೆಗೆ ಹಾಜರಾಗಲು ಎರಡು ಬಾರಿ ನೋಟಿಸ್ ನೀಡಿದ್ದರು. ಸಮೀರ್ ಯಾವುದೇ ಉತ್ತರ ನೀಡದ ಹಿನ್ನೆಲೆಯಲ್ಲಿ ವಶಕ್ಕೆ ಪಡೆಯಲು ಸಿದ್ಧತೆ ನಡೆಸಿದರು. ಆದರೆ ಸಮೀರ್ ಸಿಕ್ಕಿರಲಿಲ್ಲ. ನಿರೀಕ್ಷಣಾ ಜಾಮೀನು ಪಡೆದುಕೊಂಡಿದ್ದರು. ಭಾನುವಾರ ವಿಚಾರಣೆಗೆ ಹಾಜರಾಗಿದ್ದ ಅವರು ಸೋಮವಾರ ಕೂಡ ವಿಚಾರಣೆಗೆ ಹಾಜರಾಗಲಿದ್ದಾರೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular