BREAKING : ‘ಬಿಗ್ ಬಾಸ್’ ಸ್ಪರ್ಧಿ ಡ್ರೋನ್ ಪ್ರತಾಪ್ ಗೆ ಸಂಕಷ್ಟ : ಕೋರ್ಟ್ ನಿಂದ ‘ಸಮನ್ಸ್’ ಜಾರಿ

ಬೆಂಗಳೂರು : ಬಿಗ್ ಬಾಸ್ ಸ್ಪರ್ಧಿ ಡ್ರೋನ್ ಪ್ರತಾಪ್ ಗೆ ಸಂಕಷ್ಟ ಎದುರಾಗಿದ್ದು, ಕೋರ್ಟ್ ನಿಂದ ಸಮನ್ಸ್ ಜಾರಿಯಾಗಿದೆ.

ಹೌದು, ಬಿಗ್ ಬಾಸ್’ ಸ್ಪರ್ಧಿ ಡ್ರೋನ್ ಪ್ರತಾಪ್ ಗೆ ಸಂಕಷ್ಟ ಎದುರಾಗಿದ್ದು, ಈತನ ವಿರುದ್ಧ 2.50 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಲಾಗಿದೆ. ಈ ಸಂಬಂಧ ಕೋರ್ಟ್ ನಿಂದ ಸಮನ್ಸ್ ಜಾರಿಯಾಗಿದೆ ಎಂದು ತಿಳಿದು ಬಂದಿದೆ. ಫೆ.20 ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದೆ.

ಕೋವಿಡ್ ಸಂದರ್ಭದಲ್ಲಿ ಬಿಬಿಎಂಪಿ ಅಧಿಕಾರಿಗಳು ತನ್ನನ್ನು ಕೆಟ್ಟದಾಗಿ ನಡೆಸಿಕೊಂಡಿದ್ದಾರೆ ಎಂದು ಡ್ರೋನ್ ಪ್ರತಾಪ್ ಹೇಳಿದ್ದರು. ಕ್ವಾರಂಟೈನ್ ಸಮಯದಲ್ಲಿ ಅಧಿಕಾರಿಯೊಬ್ಬರು ನನ್ನನ್ನು ಕೆಟ್ಟದಾಗಿ ನಡೆಸಿಕೊಂಡಿದ್ದರು. ತಲೆಗೆ ಹೊಡೆದು ತೊಂದರೆ ಕೊಟ್ಟಿದ್ದರು. ಹುಚ್ಚ ಎಂದು ಹೇಳಿದ್ದರು. ಅಲ್ಲದೇ ಹುಚ್ಚ ಅಂತ ಪೇಪರ್ ಗೆ ಸಹಿ ಹಾಕು ಎಂದು ಒತ್ತಾಯಿಸಿದ್ದರು ಎಂದು ಪ್ರತಾಪ್ ಬಿಬಿಎಂಪಿ ನೋಡಲ್ ಅಧಿಕಾರಿ ವಿರುದ್ಧ ಗಂಭೀರ ಆರೋಪ ಮಾಡಿದ್ದರು.

ಈ ಸಂಬಂಧ ಪ್ರಯಾಗ್ ರಾಜ್ ಎಂಬುವವರು 50 ಲಕ್ಷ ರೂ. ಮಾನನಷ್ಟ ಮೊಕದ್ದಮೆ ಹಾಗೂ ಮತ್ತೊಬ್ಬ ಅಧಿಕಾರಿ 2 ಕೋಟಿ ರೂ. ಮೊಕದ್ದಮೆ ಹೂಡಿದ್ದರು.  ಬಿಗ್ ಬಾಸ್ ಮನೆಯಲ್ಲಿ ಡ್ರೋನ್ ಪ್ರತಾಪ್ ಕೊರೊನಾ ಬಂದಿದ್ದ ಸಂದರ್ಭದಲ್ಲಿ ತಾನು ಅನುಭವಿಸಿದ್ದ ಕಷ್ಟಗಳ ಬಗ್ಗೆ ಹೇಳಿಕೊಂಡಿದ್ದರು. ಈ ವೇಳೆ ಬಿಬಿಎಂಪಿ ನೋಡಲ್ ಅಧಿಕಾರಿ ವಿರುದ್ಧ ಗಂಭೀರ ಆರೋಪ ಮಾಡಿದ್ದರು. ಕ್ವಾರಂಟೈನ್ ಸಮಯದಲ್ಲಿ ಅಧಿಕಾರಿಯೊಬ್ಬರು ನನ್ನನ್ನು ಕೆಟ್ಟದಾಗಿ ನಡೆಸಿಕೊಂಡಿದ್ದರು ಎಂದು ಪ್ರತಾಪ್ ಬಿಬಿಎಂಪಿ ನೋಡಲ್ ಅಧಿಕಾರಿ ವಿರುದ್ಧ ಗಂಭೀರ ಆರೋಪ ಮಾಡಿದ್ದರು. ಆದರೆ ಡ್ರೋನ್ ಪ್ರತಾಪ್ ಮಾತಿನಲ್ಲಿ ಯಾವುದೇ ಹುರುಳಿಲ್ಲ, ಇದು ಸುಳ್ಳು ಎಂದು ಬಿಬಿಎಂಪಿ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದರು.

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read