ಹುಬ್ಬಳ್ಳಿ: ಬಿಪಿಎಲ್ ಕಾರ್ಡ್ ಗಳನ್ನು ಪರಿಷ್ಕರಣೆ ಮಾಡಬೇಕಾಗಿದೆ. ಕೇಂದ್ರ ಸರ್ಕಾರ ಮಿತಿ ಹೇರಿದೆ ಎಂದು ಆಹಾರ ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 17 ಲಕ್ಷ ಹೆಚ್ಚುವರಿ ಕಾರ್ಡುಗಳಿಗೆ ಪಡಿತರ ನೀಡಲಾಗುತ್ತಿದೆ. ಪಡಿತರ ಹೆಚ್ಚು ಮಾಡಬೇಕೆಂದು ಮನವಿ ಮಾಡಿದ್ದೇವೆ. ಜೋಳ ಖರೀದಿಸಿ ಮೂರು ತಿಂಗಳು ಬಿಟ್ಟರೆ ಹುಳ ಆಗುತ್ತಿದೆ. ಹೀಗಾಗಿ ಖರೀದಿಸಿದ ತಕ್ಷಣ ಹಂಚಿಕೆ ಮಾಡಲು ಹೇಳಿದ್ದೇನೆ. ಬೇಳೆ, ಎಣ್ಣೆ ಕೊಡುವ ಬಗ್ಗೆಯೂ ಚಿಂತನೆ ನಡೆದಿದೆ. ಕಾಳಸಂತೆ ಮಾರಾಟ ಮಾಡುವ ವಿಚಾರದ ಬಗ್ಗೆ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದ್ದೇವೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಯಾವುದೇ ಕ್ರಾಂತಿ ಆಗುವುದಿಲ್ಲ ಎಂದು ಮುನಿಯಪ್ಪ ಹೇಳಿದ್ದು, ಸಿದ್ಧರಾಮಯ್ಯ ಅವರನ್ನು ನಾಲ್ವಡಿ ಕೃಷ್ಣರಾಜ ಒಡೆಯರ್ ಗೆ ಹೋಲಿಸಿದ ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡುವುದಿಲ್ಲ. ಆದರೆ, ಸಿಎಂ ಸಿದ್ದರಾಮಯ್ಯ ಅಭಿವೃದ್ಧಿ ಕೆಲಸ ಮಾಡುತ್ತಿದ್ದಾರೆ. ಐದು ಗ್ಯಾರಂಟಿಗಳನ್ನು ಮುಂದುವರೆಸಿದ್ದಾರೆ. ಅಭಿವೃದ್ಧಿಗೂ ಹಣ ಕೊಟ್ಟಿದ್ದಾರೆ. ರಸಗೊಬ್ಬರ ಪೂರೈಸುವಂತೆ ಕೇಂದ್ರಕ್ಕೆ ಸಿಎಂ ಪತ್ರ ಬರೆದಿದ್ದಾರೆ. ಈ ಹಿಂದೆ ಸಕಾಲದಲ್ಲಿ ಗೊಬ್ಬರ ಪೂರೈಸುತ್ತಿದ್ದರು. ಪ್ರಸಕ್ತ ವರ್ಷ ಕೊರತೆಯಾಗಿದೆ ಎಂದು ಹೇಳಿದ್ದಾರೆ.