ರಾಮನಗರ: ಚಾಕುವಿನಿಂದ ಇರಿದು ಪತಿಯೇ ಪತ್ನಿಯನ್ನು ಕೊಲೆ ಮಾಡಿದ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರದ ಯಾರಬ್ ನಗರದಲ್ಲಿ ನಡೆದಿದೆ.
ಪತ್ನಿ ಸೋಫಿಯಾ ಬಾನು(21) ಕೊಲೆಯಾದ ಮಹಿಳೆ ಎಂದು ಹೇಳಲಾಗಿದೆ. ದುರ್ಗ ಚಾಕುವಿನಿಂದ ಇರಿದು ಪತ್ನಿಯನ್ನು ಕೊಲೆ ಮಾಡಿದ ಆರೋಪಿ ಸಲ್ಮಾನ್(22) ಪೊಲೀಸ್ ವಶದಲ್ಲಿದ್ದಾನೆ. ಕೌಟುಂಬಿಕ ಕಲಹ, ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಕೊಲೆ ಶಂಕೆ ವ್ಯಕ್ತವಾಗಿದೆ.
ಪತ್ನಿಯನ್ನು ಹತ್ಯೆ ಮಾಡಿ ನಂತರ ಪೊಲೀಸ್ ಠಾಣೆಗೆ ಹೋಗಿ ಆರೋಪಿ ಶರಣಾಗಿದ್ದಾನೆ. ರಾಮನಗರ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

