ಹಾವೇರಿ: ಮುಸ್ಲಿಂ ಸಮುದಾಯದ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ ಆರೋಪ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲೆ ರಾಣೇಬೆನ್ನೂರಿನ ಕೋಟೆ ಓಣಿಯಲ್ಲಿ ವೈದ್ಯನ ಮೇಲೆ ಹಲ್ಲೆ ನಡೆಸಲಾಗಿದೆ.
ರಾಜೇಶ್ವರಿ ನಗರದ ನಿವಾಸಿ ಡಾ. ಗುರುಮೂರ್ತಯ್ಯ ರಾಚೋಟಿಮಠ ಅವರ ಮೇಲೆ ಹಲ್ಲೆ ನಡೆಸಲಾಗಿದೆ/ ಗುರುಮೂರ್ತಯ್ಯನ ಕ್ಲಿನಿಕ್ ಗೆ ನುಗ್ಗಿದ 20 ರಿಂದ 30 ಜನ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಕ್ಲಿನಿಕ್ ಸಮೀಪ ನಿಲ್ಲಿಸಿದ್ದ ಬೈಕ್ ಗೆ ಆರೋಪಿಗಳು ಬೆಂಕಿ ಹಚ್ಚಿದ್ದಾರೆ. ಕೂಡಲೇ ಘಟನಾ ಸ್ಥಳಕ್ಕೆ ಬಂದ ಪೊಲೀಸರು ವೈದ್ಯನನ್ನು ರಕ್ಷಣೆ ಮಾಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಘಟನಾ ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾಗಿದ್ದು, ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ರಾಣೆಬೆನ್ನೂರು ನಗರ ಪೊಲೀಸ್ ಠಾಣೆಯಲ್ಲಿ ದೂರು, ಪ್ರತಿ ದೂರು ದಾಖಲಾಗಿದೆ.
ಸೈಯದ್ ಅಹಮದ್ ಮುಕಾಮ್ದಾರ್, ಸೈಯದ್ ಹೊನ್ನಾಳಿ, ಜಾಫರ್ ಕಿಲ್ಲೆದಾರ, ಅಬ್ದುಲ್ ಮುನಾಫ್ ಸೇರಿದಂತೆ ಹಲವರ ವಿರುದ್ಧ ದೂರು ದಾಖಲಾಗಿದೆ.