HomeLatest NewsBREAKING: ನನಗೆ ಯಾರೇ ಬೈದ್ರೂ ರಿಯಾಕ್ಟ್ ಮಾಡಬೇಡಿ: ಬರ್ತಡೇ ವೇಳೆ ಅಭಿಮಾನಿಗಳಿಗೆ ಕಿಚ್ಚ ಸುದೀಪ್ ಮನವಿ

BREAKING: ನನಗೆ ಯಾರೇ ಬೈದ್ರೂ ರಿಯಾಕ್ಟ್ ಮಾಡಬೇಡಿ: ಬರ್ತಡೇ ವೇಳೆ ಅಭಿಮಾನಿಗಳಿಗೆ ಕಿಚ್ಚ ಸುದೀಪ್ ಮನವಿ

ಬೆಂಗಳೂರು: ನಟ ಕಿಚ್ಚ ಸುದೀಪ್ ಅವರು ಅಭಿಮಾನಿಗಳೊಂದಿಗೆ ಒಂದು ದಿನ ಮೊದಲೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.

ಆನ್ಲೈನ್ ನಲ್ಲಿ ನನಗೆ ಯಾರೇ ಬೈದರೂ ರಿಯಾಕ್ಟ್ ಮಾಡಬೇಡಿ ಎಂದು ಅವರು ತಿಳಿಸಿದ್ದಾರೆ. ಬೆಂಗಳೂರಿನ ನಂದಿ ಲಿಂಕ್ ಗ್ರೌಂಡ್ ನಲ್ಲಿ ನಡೆದ 52ನೇ ವರ್ಷದ ಹುಟ್ಟುಹಬ್ಬದ ಸಮಾರಂಭದಲ್ಲಿ ಕಿಚ್ಚ ಸುದೀಪ್ ಅಭಿಮಾನಿಗಳೊಂದಿಗೆ ಬರ್ತಡೇ ಆಚರಿಸಿಕೊಂಡು ಸಂಭ್ರಮಿಸಿದ್ದಾರೆ.

ಯಾವ ಕಲಾವಿದರಿಗೂ ಅವಮಾನ ಮಾಡಿ ಮಾಡಬೇಡಿ. ಆನ್ಲೈನ್ ನಲ್ಲಿ ನನಗೆ ಯಾರೇ ಬೈದರೂ ರಿಯಾಕ್ಟ್ ಮಾಡಬೇಡಿ ಎಂದು ಸುದೀಪ್ ಹೇಳಿದ್ದಾರೆ. ಸುದೀಪ್ ಹುಟ್ಟುಹಬ್ಬದ ಅಂಗವಾಗಿ ‘ಮಾರ್ಕ್’ ಚಿತ್ರದ ಟೈಟಲ್ ಬಿಡುಗಡೆ ಮಾಡಲಾಗಿದೆ. ‘ಬಿಗ್ ಬಾಸ್’ ಸೀಸನ್ 12ರ ದಿನಾಂಕವನ್ನು ಕೂಡ ಘೋಷಣೆ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಭಾರೀ ಸಂಖ್ಯೆಯಲ್ಲಿ ಸೇರಿದ್ದ ಅಭಿಮಾನಿಗಳು ಸುದೀಪ್ ಹುಟ್ಟುಹಬ್ಬದ ಸಂಭ್ರಮದಲ್ಲಿ ಭಾಗಿಯಾಗಿ ಶುಭ ಕೋರಿದ್ದಾರೆ. ಸುದೀಪ್ ಹುಟ್ಟುಹಬ್ಬದ ಅಂಗವಾಗಿ ಅಭಿಮಾನಿಗಳಿಂದ ವಿವಿಧ ಸಮಾಜಮುಖಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular