HomeLatest NewsBREAKING: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರ್ ಡಿಕ್ಕಿ, ಇಬ್ಬರು ಸಾವು

BREAKING: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರ್ ಡಿಕ್ಕಿ, ಇಬ್ಬರು ಸಾವು

ಚಿಕ್ಕಬಳ್ಳಾಪುರ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರ್ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ತಿಪ್ಪಗಾನಹಳ್ಳಿ ಬಳಿ ನಡೆದಿದೆ.

ಮರಕ್ಕೆ ಕಾರ್ ಡಿಕ್ಕಿ ಹೊಡೆದಿದ್ದು, ಕಾರ್ ನಲ್ಲಿದ್ದ ಇಬ್ಬರು ಮೃತಪಟ್ಟಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ತಿಪ್ಪಗಾನಹಳ್ಳಿಯಲ್ಲಿ ಅಪಘಾತ ಸಂಭವಿಸಿದೆ. ಕಾರ್ ನಲ್ಲಿದ್ದ ನಾಲ್ವರ ಪೈಕಿ ಇಬ್ಬರು ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗೌರಿಬಿದನೂರು ಕಡೆಯಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ಕಾರ್ ಅಪಘಾತಕ್ಕೀಡಾಗಿದೆ. ಸ್ಥಳಕ್ಕೆ ಮಂಚೇನಹಳ್ಳಿ ಠಾಣೆ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular