HomeKarnatakaBREAKING : ಮಾಜಿ ಸಿಎಂ 'S.M ಕೃಷ್ಣ' ನಿಧನ ; ರಾಜ್ಯದ ಎಲ್ಲಾ ಸರ್ಕಾರಿ ಕಚೇರಿ,...

BREAKING : ಮಾಜಿ ಸಿಎಂ ‘S.M ಕೃಷ್ಣ’ ನಿಧನ ; ರಾಜ್ಯದ ಎಲ್ಲಾ ಸರ್ಕಾರಿ ಕಚೇರಿ, ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

ಬೆಂಗಳೂರು : ಮಾಜಿ ಸಿಎಂ ಎಸ್ ಕೃಷ್ಣಅವರ ನಿಧನದ ಹಿನ್ನೆಲೆ ನಾಳೆ ರಾಜ್ಯದ ಎಲ್ಲಾ ಸರ್ಕಾರಿ ಕಚೇರಿ ಶಾಲಾ-ಕಾಲೇಜುಗಳಿಗೆ ಸರ್ಕಾರ ರಜೆ ಘೋಷಣೆ ಮಾಡಿದೆ.

ಮಾಜಿ ಸಿಎಂ ಎಸ್ ಎಂ ಕೃಷ್ಣ ನಿಧನದ ಹಿನ್ನೆಲೆ ನಾಳೆ ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದ್ದು, ಶಾಲಾ ಕಾಲೇಜುಗಳಿಗೂ ರಜೆ ಘೋಷಣೆ ಮಾಡಲಾಗಿದೆ. ಈ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಮಾಹಿತಿ ನೀಡಿದ್ದಾರೆ.

ಮಾಜಿ ಸಿಎಂ S.M ಕೃಷ್ಣ ನಿಧನರಾದ ಹಿನ್ನೆಲೆ ಇಂದಿನಿಂದ ಮೂರು ದಿನ ರಾಜ್ಯಾದ್ಯಂತ ಶೋಕಾಚರಣೆ ಘೋಷಿಸಲಾಗಿದೆ. ಹಾಗೂ ಸಕಲ ಸರ್ಕಾರಿ ಗೌರವಗಳೊಂದಿಗೆ ಎಸ್ ಎಂ ಕೃಷ್ಣ ಅಂತ್ಯಕ್ರಿಯೆ ನಡೆಸಲು ಸರ್ಕಾರ ಅಧಿಸೂಚನೆ ಹೊರಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳು ಹಾಗೂ ಮಾಜಿ ಕೇಂದ್ರ ಸಚಿವರಾಗಿದ್ದ ಶ್ರೀ ಎಸ್ ಎಂ ಕೃಷ್ಣ ರವರು ದಿನಾಂಕ: 10.12.2024ರ ಮಂಗಳವಾರದಂದು ಪೂರ್ವಾಹ್ನ 02:30ಕ್ಕೆ ನಿಧನರಾದ ವಿಷಯವನ್ನು ಕರ್ನಾಟಕ ರಾಜ್ಯ ಸರ್ಕಾರವು ತೀವ್ರ ಸಂತಾಪದಿಂದ ಈ ಮೂಲಕ ಪ್ರಕಟಿಸಿದೆ.ಹುಟ್ಟೂರಾದ ಮಂಡ್ಯ ಜಿಲ್ಲೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗುವುದು ಮತ್ತು ದಿನಾಂಕ:10.12.2024 ರಿಂದ 12.12.2024 ರವರೆಗೆ (ಉಭಯ ದಿನಗಳು ಸೇರಿ) ಮೂರು ದಿನಗಳು ಶೋಕವನ್ನು ಆಚರಿಸಲಾಗುವುದು. ಈ ಅವಧಿಯಲ್ಲಿ ಯಾವುದೇ ಸಾರ್ವಜನಿಕ ಮನೋರಂಜನಾ ಕಾರ್ಯಕ್ರಮಗಳು ಇರುವುದಿಲ್ಲ. ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳು ಮೇಲೆ ರಾಷ್ಟ್ರ ಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಲಾಗುವುದು ಎಂದು ಸರ್ಕಾರ ಅಧಿಸೂಚನೆ ಹೊರಡಿಸಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular