BREAKING : ‘ದುನಿಯಾ ವಿಜಯ್’ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಗಿಫ್ಟ್ : ‘ಭೀಮಾ’ ಟೀಸರ್ ರಿಲೀಸ್ |Watch Teaser

ಬೆಂಗಳೂರು : ನಟ ‘ದುನಿಯಾ ವಿಜಯ್’ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಭರ್ಜರಿ ಗಿಫ್ಟ್ ಸಿಕ್ಕಿದ್ದು, ‘ಭೀಮಾ’ ಚಿತ್ರದ ಟೀಸರ್ ರಿಲೀಸ್ ಆಗಿದೆ.

ಹಲವು ಅಭಿಮಾನಿಗಳ ಸಮ್ಮುಖದಲ್ಲಿ ತಂದೆ-ತಾಯಿ ಸಮಾಧಿ ಬಳಿ ನಟ ದುನಿಯಾ ವಿಜಯ್ ಹುಟ್ಟು ಹಬ್ಬವನ್ನು ಆಚರಿಸಿಕೊಂಡಿದ್ದು, ಈ ಸಂದರ್ಭದಲ್ಲಿ ಅವರು ನಟಿಸಿ ನಿರ್ದೇಶಿಸುತ್ತಿರುವ ‘ಭೀಮ’ ಸಿನಿಮಾದ ಟೀಸರ್ ರಿಲೀಸ್ ಆಗಿದೆ.

ದುನಿಯಾ ವಿಜಯ್ ಅವರು ಕಳೆದ ವರ್ಷವೂ ಅವರ ಹುಟ್ಟು ಹಬ್ಬವನ್ನು ಅವರ ತಂದೆ, ತಾಯಿ ಸಮಾಧಿ ಬಳಿಯೇ ಮಾಡಿಕೊಂಡಿದ್ದರು. ಈ ವರ್ಷವೂ ಕೂಡ ತಂದೆ-ತಾಯಿ ಸಮಾಧಿ ಬಳಿ ನಟ ದುನಿಯಾ ವಿಜಯ್ ಹುಟ್ಟು ಹಬ್ಬವನ್ನು ಆಚರಿಸಿಕೊಂಡಿದ್ದಾರೆ.

‘ಸಲಗ’ ಯಶಸ್ಸಿನ ಬಳಿಕ ದುನಿಯಾ ವಿಜಯ್ ಇದೀಗ ಮತ್ತೊಮ್ಮೆ ನಿರ್ದೇಶಿಸಿ ನಾಯಕನಾಗಿ ಅಭಿನಯಿಸುತ್ತಿರುವ ‘ಭೀಮ’ ಸಿನಿಮಾ ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಈ ಚಿತ್ರವನ್ನು ಕೃಷ್ಣ ಕ್ರಿಯೇಶನ್ಸ್ ಹಾಗೂ ಜಗದೀಶ್ ಫಿಲಂಸ್ ಬ್ಯಾನರ್ ನಡಿ ಕೃಷ್ಣ ಸಾರ್ಥಕ್ ಮತ್ತು ಜಗದೀಶ್ ಗೌಡ ಬಂಡವಾಳ ಹೂಡಿದ್ದಾರೆ. ಚರಣ್ ರಾಜ್ ಸಂಗೀತ ಸಂಯೋಜನೆ ನೀಡಿದ್ದು, ಶಿವಸೇನಾ ಛಾಯಾಗ್ರಹಣವಿದೆ. ದುನಿಯಾ ವಿಜಯ್ ಹಾಗೂ ಅಶ್ವಿನಿ ಪ್ರಮುಖ ಪಾತ್ರದಲ್ಲಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read