ಬೆಂಗಳೂರು: ನಟ ದುನಿಯಾ ವಿಜಯ್ ಅವರ ಪುತ್ರ ಸಾಮ್ರಾಟ್ ವಿರುದ್ಧ ಹಲ್ಲೆ ಆರೋಪ ಕೇಳಿಬಂದಿದ್ದು, ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕಾರು ಓವರ್‌ಟೇಕ್ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾಮ್ರಾಟ್ ಹಾಗೂ ಮನೀಶ್ ಗೌಡ ನಡುವೆ ಕಿರಿಕ್ ನಡೆದಿರುವುದಾಗಿ ಆರೋಪಿಸಲಾಗಿದೆ.
ನಿನ್ನೆ ಸಂಜೆ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಸಾಮ್ರಾಟ್ ಹಾಗೂ ಅವರ ಸ್ನೇಹಿತರು ಜಿಪ್ಸಿ ಕಾರಿನಲ್ಲಿ ತೆರಳುತ್ತಿದ್ದ ವೇಳೆ, ಮನೀಶ್ ಗೌಡ ಹಾಗೂ ಅವರ ಸ್ನೇಹಿತರು ಐ-20 ಕಾರಿನಲ್ಲಿ ಓವರ್‌ಟೇಕ್ ಮಾಡಿದ್ದಾರೆ ಎನ್ನಲಾಗಿದೆ.ಈ ವೇಳೆ ಸಾಮ್ರಾಟ್ ಕಾರನ್ನು ಮನೀಶ್ ಹಿಂದಿಕ್ಕಿದ ವಿಚಾರಕ್ಕೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದ್ದು, ಬಳಿಕ ಕಿರಿಕ್ ಉಂಟಾಗಿದೆ ಎಂದು ಆರೋಪಿಸಲಾಗಿದೆ.
ಮಾಹಿತಿಯ ಪ್ರಕಾರ, ಕಾರು ಓವರ್‌ಟೇಕ್ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾಮ್ರಾಟ್ ಹಾಗೂ ಅವರ ಸಹಪಾಠಿ ಮನೀಶ್ ಗೌಡ ನಡುವೆ ಕಿರಿಕ್ ನಡೆದಿದೆ ಎನ್ನಲಾಗಿದೆ.ನಿನ್ನೆ ಸಂಜೆ ರಾಜರಾಜೇಶ್ವರಿ ನಗರದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಸಾಮ್ರಾಟ್ ಹಾಗೂ ಅವರ ಸ್ನೇಹಿತರು ಜಿಪ್ಸಿ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಮನೀಶ್ ಗೌಡ ಹಾಗೂ ಅವರ ಸ್ನೇಹಿತರು ಐ-20 ಕಾರಿನಲ್ಲಿ ಓವರ್‌ಟೇಕ್ ಮಾಡಿದ್ದಾರೆ ಎನ್ನಲಾಗಿದೆ.
ಇದಾದ ಬಳಿಕ ಓವರ್‌ಟೇಕ್ ಮಾಡಿದ ವಿಚಾರಕ್ಕೆ ಎರಡೂ ಕಡೆಯವರ ನಡುವೆ ಮಾತಿನ ಚಕಮಕಿ ನಡೆದಿದ್ದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ ಎಂದು ಆರೋಪಿಸಲಾಗಿದೆ.
ಸಾಮ್ರಾಟ್ ಹಾಗೂ ಅವರ ಸ್ನೇಹಿತರು ಮನೀಶ್ ಅವರನ್ನು ಕಾರಿನಲ್ಲಿ ಎಳೆದೊಯ್ದು ಹಲ್ಲೆ ನಡೆಸಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. ಘಟನೆಗೆ ಸಂಬಂಧಿಸಿದಂತೆ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಸಂಬಂಧ ಮನೀಶ್ ಗೌಡ ದೂರು ನೀಡಿದ್ದು, ಪೊಲೀಸರು ಪ್ರಕರಣದ ಕುರಿತು ತನಿಖೆ ನಡೆಸುತ್ತಿದ್ದಾರೆ.

