BIG NEWS : ಫೆಬ್ರವರಿಯಲ್ಲಿ ದಸರಾ ಆನೆ ‘ಅರ್ಜುನನ ಸ್ಮಾರಕ’ ಉದ್ಘಾಟನೆ : ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು : ಹಾಸನ ಜಿಲ್ಲೆಯ ಯಸಳೂರು ಅರಣ್ಯದಲ್ಲಿ 2023ರ ಡಿಸೆಂಬರ್ 4 ರಂದು ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಮೃತಪಟ್ಟ, ದಸರಾ ಅಂಬಾರಿ ಹೊರುತ್ತಿದ್ದ ಆನೆ ಅರ್ಜುನನ ಸ್ಮಾರಕವನ್ನು ಫೆಬ್ರವರಿ ಮೊದಲ ವಾರ ಉದ್ಘಾಟಿಸಲಾಗುವುದು ಎಂದು ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ ಅವರು ತಿಳಿಸಿದ್ದಾರೆ.

ಹಾಸನ ಜಿಲ್ಲೆಯ ಯಸಳೂರು ಅರಣ್ಯದಲ್ಲಿ 2023ರ ಡಿಸೆಂಬರ್‌ 4 ರಂದು ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಮೃತಪಟ್ಟ, ದಸರಾ ಅಂಬಾರಿ ಹೊರುತ್ತಿದ್ದ ಆನೆ ಅರ್ಜುನನ ಸ್ಮಾರಕವನ್ನು ಫೆಬ್ರವರಿ ಮೊದಲ ವಾರ ಉದ್ಘಾಟಿಸಲಾಗುವುದು. ಸ್ಮಾರಕ ಅರಣ್ಯ ಪ್ರದೇಶದಲ್ಲಿದ್ದು, ಸಾರ್ವಜನಿಕರ ವೀಕ್ಷಣೆಗೆ ತೊಡಕಾಗದ ರೀತಿಯಲ್ಲಿ ಕ್ರಮ ವಹಿಸಲಾಗುವುದು ಎಂದು ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ  ಅವರು ತಿಳಿಸಿದ್ದಾರೆ.

ಕಾಕನಕೋಟೆಯಲ್ಲಿ 1968ರಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಸೆರೆ ಹಿಡಿಯಲಾಗಿದ್ದ ಅರ್ಜುನ, ನಾಗರಹೊಳೆ ಅರಣ್ಯ ವ್ಯಾಪ್ತಿಯಲ್ಲಿರುವ ಬಳ್ಳೆ ಆನೆ ಶಿಬಿರದಲ್ಲಿದ್ದ. ಹೀಗಾಗಿ ಬಳ್ಳೆಯಲ್ಲಿ ಕೂಡ ಸ್ಮಾರಕ ನಿರ್ಮಿಸಲಾಗಿದ್ದು, ಫೆಬ್ರವರಿ ಅಂತ್ಯದಲ್ಲಿ ಅಥವಾ ಮಾರ್ಚ್‌ ಮೊದಲ ವಾರದಲ್ಲಿ ಆ ಸ್ಮಾರಕವನ್ನೂ ಸಾರ್ವಜನಿಕರ ವೀಕ್ಷಣೆಗೆ ಮುಕ್ತಗೊಳಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read