HomeKarnatakaBREAKING : ಅರ್ಜುನನ ಸಾವಿನ ಬೆನ್ನಲ್ಲೇ ಮತ್ತೊಂದು ದುರಂತ, ವಿದ್ಯುತ್ ಶಾಕ್ ಗೆ ದಸರಾ ಆನೆ...

BREAKING : ಅರ್ಜುನನ ಸಾವಿನ ಬೆನ್ನಲ್ಲೇ ಮತ್ತೊಂದು ದುರಂತ, ವಿದ್ಯುತ್ ಶಾಕ್ ಗೆ ದಸರಾ ಆನೆ ‘ಅಶ್ವತ್ಥಾಮ’ ಸಾವು..!

ಮೈಸೂರು : ವಿದ್ಯುತ್ ತಂತಿ ತುಳಿದು ದಸರಾ ಆನೆ ಅಶ್ವತ್ಥಾಮ ಮೃತಪಟ್ಟ ಘಟನೆ ಇಂದು ನಡೆದಿದೆ. ಅರ್ಜುನ ಆನೆ ಸಾವನ್ನಪ್ಪಿದ ಬೆನ್ನಲ್ಲೇ ಇದೀಗ ಮತ್ತೊಂದು ದಸರಾ ಆನೆ ಮೃತಪಟ್ಟಿದೆ.

ನಾಗರಹೊಳೆ ಅರಣ್ಯ ಪ್ರದೇಶದ ಗಡಿಯಲ್ಲಿ ಹಾಕಲಾಗಿರುವ ಸೋಲಾರ್ ತಂತಿ ಬೇಲಿಯಲ್ಲಿ ವಿದ್ಯುತ್ ಪ್ರವಹಿಸಿ ಸಾವನಪ್ಪಿದ ಅಶ್ವತ್ಥಾಮ ಸಾವನ್ನಪ್ಪಿದ್ದಾನೆ. ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಭೀಮನಕಟ್ಟೆ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ.

2017ರಲ್ಲಿ ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನಲ್ಲಿ ಅಶ್ವತ್ಥಾಮ ಆನೆಯನ್ನು ಸೆರೆ ಹಿಡಿಯಲಾಗಿತ್ತು. ನಂತರ ಅದನ್ನು ಪಳಗಿಸಿ ಮೈಸೂರು ದಸರಾ ಮಹೋತ್ಸವಕ್ಕೆ ಕರೆತರಲಾಗಿತ್ತು. ಮೈಸೂರಿನಲ್ಲಿ 8 ಬಾರಿ ಅಂಬಾರಿ ಹೊತ್ತಿದ್ದ ಆನೆ ಅರ್ಜುನ ಮೃತಪಟ್ಟ ಘಟನೆ ಇನ್ನೂ ಜನರ ಮನಸ್ಸಿನಲ್ಲಿ ಹಚ್ಚ ಹಸಿರಾಗಿದೆ. ಈ ಬೆನ್ನಲ್ಲೇ ದಸರಾ ಆನೆ ಅಶ್ವತ್ಥಾಮ ಮೃತಪಟ್ಟ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular