ಛತ್ತೀಸ್’ಗಢ : ಛತ್ತೀಸ್’ಗಢದ ಮಾಜಿ ಸಿಎಂ ಭೂಪೇಶ್ ಬಘೇಲ್ ಪುತ್ರನನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಛತ್ತೀಸ್’ಗಢ ಮಾಜಿ ಸಿಎಂ ‘ಭೂಪೇಶ್ ಬಾಘೆಲ್’ ಪುತ್ರನಿಗೆ ಇಡಿ ಶಾಕ್ ಎದುರಾಗಿದ್ದು, ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದರು. ಛತ್ತೀಸ್ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಾಘೇಲ್ ಅವರ ಭಿಲಾಯಿ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ಶುಕ್ರವಾರ ದಾಳಿ ನಡೆಸಿದೆ. ಈ ಬೆನ್ನಲ್ಲೇ ಮಾಜಿ ಸಿಎಂ ಪುತ್ರ ಚೈತನ್ಯ ಬಾಘೇಲ್ ನನ್ನು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಶುಕ್ರವಾರ ಬೆಳಿಗ್ಗೆ 6 ಗಂಟೆಗೆ ಇಡಿ ತಂಡ ನಿವಾಸವನ್ನು ಅವರೊಂದಿಗೆ ಹೆಚ್ಚಿನ ಸಂಖ್ಯೆಯ CRPF ಸಿಬ್ಬಂದಿಯೂ ಇದ್ದರು. ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ಅವರ ಮಗ ಚೈತನ್ಯ ಬಾಘೇಲ್ ವಿರುದ್ಧದ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಈ ದಾಳಿ ನಡೆದಿದೆ.
ED आ गई.
— Bhupesh Baghel (@bhupeshbaghel) July 18, 2025
आज विधानसभा सत्र का अंतिम दिन है.
अडानी के लिए तमनार में काटे जा रहे पेड़ों का मुद्दा आज उठना था.
भिलाई निवास में “साहेब” ने ED भेज दी है.
(कार्यालय- भूपेश बघेल)