ಬೆಂಗಳೂರು : ಇಡಿ ದಾಳಿ ಬೆನ್ನಲ್ಲೇ ಸಿಎಂ ಗೃಹ ಸಚಿವ ಜಿ.ಪರಮೇಶ್ವರ್ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾಗಿದ್ದಾರೆ.
ಇಡಿ ದಾಳಿ ಬಗ್ಗೆ ಸುದ್ದಿಗಾರರ ಜೊತೆ ಮಾತನಾಡಿದ ಅವರು ಶಿಕ್ಷಣ ಸಂಸ್ಥೆಗಳ ಮೇಲೆ ಯಾವ ಕಾರಣಕ್ಕೆ ದಾಳಿ ನಡೆಸಿದ್ದಾರೋ ಗೊತ್ತಿಲ್ಲ. ಇದಕ್ಕೆ ನಾನು ಸಂಪೂರ್ಣ ಸಹಕಾರ ನೀಡುತ್ತೇನೆ ಎಂದರು. ಇಡಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಸಂಸ್ಥೆ ಮೂಲಕ ನಾವು ಅಳಿಲು ಸೇವೆ ಮಾಡುತ್ತಿದ್ದೇವೆ ಎಂದರು.
ಎಲ್ಲರಿಗೂ ಕಾನೂನು ಒಂದೇ, ಆ ಕಾನೂನನ್ನು ನಾವು ಗೌರವಿಸುತ್ತೇನೆ ಎಂದು ಹೇಳಿದರು. ಇಡಿ ಅಧಿಕಾರಿಗಳ ತನಿಖೆಗೆ ನಮ್ಮ ಸಂಸ್ಥೆ ಸಂಪೂರ್ಣ ಸಹಕಾರ ನೀಡಲಿದೆ. ನಾನು ಸಹಕಾರ ನೀಡುತ್ತೇನೆ ಎಂದರು.
TAGGED:ಜಿ.ಪರಮೇಶ್ವರ್.