BREAKING : ತಡರಾತ್ರಿ ವಿಜಯಪುರದಲ್ಲಿ ಭೂಕಂಪನ : ರಿಕ್ಟರ್ ಮಾಪಕದಲ್ಲಿ 3.4 ತೀವ್ರತೆ ದಾಖಲು

ವಿಜಯಪುರ : ವಿಜಯಪುರ ಜಿಲ್ಲೆಯಲ್ಲಿ ತಡರಾತ್ರಿ ಭೂಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ 3.4 ತೀವ್ರತೆ ದಾಖಲಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣ ಕೇಂದ್ರ ತಿಳಿಸಿದೆ.

ತಡರಾತ್ರಿ 1.30 ರ ಸುಮಾರಿಗೆ ಭೂಕಂಪನ ಸಂಭವಿಸಿದ್ದು, ವಿಜಯಪುರ ನಗರ, ಹೊರವಲಯದ ಐನಾಪುರ ಗ್ರಾಮ ಭೂಕಂಪನದ ಕೇಂದ್ರ ಬಿಂದುವಾಗಿದ್ದು, ಭೂಮಿಯ 3 ಕಿ.ಮೀ ಆಳದಲ್ಲಿ ಭೂಕಂಪನ ಸಂಭವಿಸಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ನಿರ್ವಹಣ ಕೇಂದ್ರ ತಿಳಿಸಿದೆ.

ವಿಜಯಪುರ ಜಿಲ್ಲೆಯಲ್ಲಿ ಕಳೆದ ಮೂರ್ನಾಲ್ಕು ವರ್ಷಗಳಿಂದ ಆಗಾಗ ಭೂಕಂಪನ ಸಂಭವಿಸುತ್ತಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read