HomeLatest NewsBREAKING: ತಡರಾತ್ರಿ ಶಾಸಕ ವೀರೇಂದ್ರ ಪಪ್ಪಿ ನಿವಾಸದಲ್ಲಿ ಇಡಿ ಶೋಧ ಅಂತ್ಯ: ಬಂಧಿಸಿಲ್ಲ ಎಂದು ಸಹೋದರ...

BREAKING: ತಡರಾತ್ರಿ ಶಾಸಕ ವೀರೇಂದ್ರ ಪಪ್ಪಿ ನಿವಾಸದಲ್ಲಿ ಇಡಿ ಶೋಧ ಅಂತ್ಯ: ಬಂಧಿಸಿಲ್ಲ ಎಂದು ಸಹೋದರ ಸ್ಪಷ್ಟನೆ

ಚಿತ್ರದುರ್ಗ: ಮಧ್ಯರಾತ್ರಿ 12:45ಕ್ಕೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ನಿವಾಸದಲ್ಲಿ ಇಡಿ ಅಧಿಕಾರಿಗಳ ದಾಳಿ ಅಂತ್ಯವಾಗಿದೆ.

ನಿನ್ನೆ ಮುಂಜಾನೆ 5 ಗಂಟೆಗೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದರು. ಶಾಸಕ ವೀರೇಂದ್ರ ಪಪ್ಪಿ ಮತ್ತು ಅವರ ಸಹೋದರರ ಮನೆಯಿಂದ ಇಡಿ ಅಧಿಕಾರಿಗಳು ತೆರಳಿದ್ದಾರೆ.

ವೀರೇಂದ್ರ ಪಪ್ಪಿ ಮನೆ ಮೇಲೆ ಇಡಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಳಿಯ ಬಳಿಕ ಅವರ ಸಹೋದರ ಕೆ.ಸಿ. ನಾಗರಾಜ್ ಪ್ರತಿಕ್ರಿಯೆ ನೀಡಿದ್ದಾರೆ. ಇಡಿ ದಾಳಿಯ ಬಗ್ಗೆ ಕಾನೂನಿನಡಿ ಉತ್ತರ ನೀಡುತ್ತೇವೆ. ಕೆ.ಸಿ. ವೀರೇಂದ್ರ ಬೆಂಗಳೂರಿನಲ್ಲಿದ್ದು, ಇಡಿ ವಶಕ್ಕೆ ಪಡೆದಿಲ್ಲ. ನೋಟಿಸ್ ಕೊಟ್ಟಾಗ ಉತ್ತರ ನೀಡುತ್ತೇವೆ. ಇನ್ನು ನೋಟಿಸ್ ನೀಡಿಲ್ಲ. ಆಸ್ತಿ ದಾಖಲೆ ತೆಗೆದುಕೊಂಡು ಹೋಗಿದ್ದಾರೆ. ಅವರು ಯಾವ ದಾಖಲೆ ಕೇಳಿದರೂ ನಾವು ಕೊಡುತ್ತೇವೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಧಿಕಾರಿಗಳು ಸಿಕ್ಕಿಂಗೆ ಹೋಗಿ ವೀರೇಂದ್ರ ವಿಚಾರಣೆ ಮಾಡಿದ್ದಾರೆ. ಅಲ್ಲಿ ಏನು ಆಗಿದೆ ಎಂದು ನಮಗೆ ಸ್ಪಷ್ಟವಾಗಿ ಗೊತ್ತಿಲ್ಲ. ಅಲ್ಲಿಂದ ಬೆಂಗಳೂರಿಗೆ ಬಂದಿದ್ದಾರೆ ಎನ್ನುವ ಮಾಹಿತಿ ಇದೆ. ದಾಳಿಯ ಹಿಂದೆ ರಾಜಕಾರಣ ಇದೆ ಎಂದು ಹೇಳುವುದಿಲ್ಲ. ನಮಗೆ ಗೊತ್ತಿಲ್ಲ. ಇದುವರೆಗೆ ನಮಗೆ ಯಾರೂ ಸಹ ನೋಟಿಸ್ ನೀಡಿಲ್ಲ. ಇಡಿ ನೋಟಿಸ್ ಕೊಟ್ಟ ನಂತರ ಉತ್ತರ ನೀಡುತ್ತೇವೆ ಎಂದು ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಸಹೋದರ ಕೆ.ಸಿ. ನಾಗರಾಜ್ ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular