HomeLatest NewsBREAKING: ಶಾಲೆಗಳ ಬಳಿ ಬೀದಿ ನಾಯಿಗಳ ಹಾವಳಿ ತಡೆಗೆ ಶಿಕ್ಷಣ ಇಲಾಖೆ ಮಾರ್ಗಸೂಚಿ ಪ್ರಕಟ

BREAKING: ಶಾಲೆಗಳ ಬಳಿ ಬೀದಿ ನಾಯಿಗಳ ಹಾವಳಿ ತಡೆಗೆ ಶಿಕ್ಷಣ ಇಲಾಖೆ ಮಾರ್ಗಸೂಚಿ ಪ್ರಕಟ

ಬೆಂಗಳೂರು: ಬೀದಿ ನಾಯಿಗಳ ಹಾವಳಿ ತಡೆ ಬಗ್ಗೆ ಶಿಕ್ಷಣ ಇಲಾಖೆಯಿಂದ ಮಾರ್ಗಸೂಚಿ ಪ್ರಕಟಿಸಲಾಗಿದೆ. ಶಾಲೆಗಳ ಸುತ್ತಮುತ್ತ ಬೀದಿ ನಾಯಿಗಳ ಉಪಟಳ ತಡೆಯಲು ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್ ಸುತ್ತೋಲೆ ಹೊರಡಿಸಿದ್ದಾರೆ.

 ಸರ್ಕಾರಿ, ಖಾಸಗಿ, ಅನುದಾನಿತ, ಅನುದಾನ ರಹಿತ ಶಿಕ್ಷಣ ಸಂಸ್ಥೆಗಳು ಬೀದಿ ನಾಯಿಗಳ ತಡೆಗಟ್ಟಲು ಶಿಕ್ಷಣ ಇಲಾಖೆಯಿಂದ ಆದೇಶ ಹೊರಡಿಸಲಾಗಿದೆ. ಎಲ್ಲಾ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿರುವ ನಾಯಿಗಳ ಬಗ್ಗೆ ನಗರ, ಗ್ರಾಮಾಂತರ ಪ್ರದೇಶದಲ್ಲಿ ಸ್ಥಳೀಯ ಸಂಸ್ಥೆಗೆ ಮಾಹಿತಿ ನೀಡಬೇಕು.

ಶಿಕ್ಷಣ ಸಂಸ್ಥೆಗಳು ಗುರುತಿಸಿದ ಬೀದಿ ನಾಯಿಗಳ ಸ್ಥಳಾಂತರಕ್ಕೆ ಸಹಕಾರ ನೀಡುವುದು, ಆಶ್ರಯ ತಾಣ ನೀಡಲು ಸ್ಥಳೀಯ ಸಂಸ್ಥೆಗಳು ಸಹಕಾರ ನೀಡಬೇಕು. ಶಿಕ್ಷಣ ಸಂಸ್ಥೆಗಳಿಂದ ಒಮ್ಮೆ ಸ್ಥಳಾಂತರಿಸಿದರೆ ಮತ್ತೆ ಪ್ರವೇಶಿಸಬಾರದು. ಬೀದಿ ನಾಯಿಗಳ ಹಾವಳಿ ತಡೆಯಲು ಕಾಂಪೌಂಡ್ ನಿರ್ಮಿಸಬೇಕು. ಬೀದಿ ನಾಯಿ ಸ್ಥಳಾಂತರ ಬಗ್ಗೆ ಸ್ಥಳೀಯ ಸಂಸ್ಥೆಗಳ ಜೊತೆ ಸಮನ್ವಯ ಕಡ್ಡಾಯವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಮನ್ವಯ ಸಾಧಿಸಲು ಶಿಕ್ಷಣ ಸಂಸ್ಥೆಗಳು ನೋಡಲು ಅಧಿಕಾರಿ ನೇಮಿಸಬೇಕು ಎಂದು ಮಾರ್ಗಸೂಚಿ ಪ್ರಕಟಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular