BREAKING: ದಕ್ಷ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ನಿಧನ: ಸಿಎಂ ಸಿದ್ಧರಾಮಯ್ಯ ಸಂತಾಪ

ಬೆಂಗಳೂರು: ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ರಸ್ತೆ ಅಪಘಾತದಲ್ಲಿ ನಿಧನರಾಗಿದ್ದು, ಮುಖ್ಯಮಂತ್ರಿ ಸಿದ್ಧರಾಮಯ್ಯ ಸಂತಾಪ ಸೂಚಿಸಿದ್ದಾರೆ.

ಮಹಾಂತೇಶ್ ಬೀಳಗಿ ನಿಧನದ ಸುದ್ದಿ ನೋವುಂಟು ಮಾಡಿದೆ. ಹಲವು ಜಿಲ್ಲೆಗಳಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ, ಜಿಲ್ಲಾಧಿಕಾರಿಯಾಗಿ ಪ್ರಾಮಾಣಿಕ ಸೇವೆ ಸಲ್ಲಿಸಿದ್ದರು. ಮಹಂತೇಶ್ ಅವರು ಕರ್ತವ್ಯ ನಿರ್ವಹಿಸುತ್ತಿದ್ದ ಎಲ್ಲ ಕಡೆಗಳಲ್ಲಿಯೂ ತಮ್ಮ ದಕ್ಷತೆಯಿಂದಾಗಿ ಹೆಜ್ಜೆ ಗುರುತುಗಳನ್ನು ಉಳಿಸಿ ಹೋಗಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ದೊರಕಲೆಂದು ಪ್ರಾರ್ಥಿಸುತ್ತೇನೆ. ಅವರ ದುಃಖತಪ್ತ ಕುಟುಂಬಕ್ಕೆ ನನ್ನ ಸಂತಾಪಗಳು ಎಂದು ಸಿಎಂ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read