HomeKarnatakaBREAKING : ಬಿಜೆಪಿ ಶಾಸಕ 'ಮುನಿರತ್ನ' ಮೇಲೆ ಮೊಟ್ಟೆ ಎಸೆದು, ಕಲ್ಲು ತೂರಿ ದಾಂಧಲೆ :...

BREAKING : ಬಿಜೆಪಿ ಶಾಸಕ ‘ಮುನಿರತ್ನ’ ಮೇಲೆ ಮೊಟ್ಟೆ ಎಸೆದು, ಕಲ್ಲು ತೂರಿ ದಾಂಧಲೆ : ಹಲವರು ಪೊಲೀಸ್ ವಶಕ್ಕೆ.!

ಬೆಂಗಳೂರು : ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆದ ಆರೋಪ ಕೇಳಿಬಂದಿದ್ದು, ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಭಾರಿ ಗಲಾಟೆ ನಡೆದಿದೆ.

ಬಿಜೆಪಿ ಶಾಸಕ ಮುನಿರತ್ನ ಕಾರಿನ ಮೇಲೆ ಕಲ್ಲು ಹಾಗೂ ಮೊಟ್ಟೆ  ಎಸೆದ ಘಟನೆ ಬೆಂಗಳೂರಿನ ನಂದಿನಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಆರ್ ಆರ್ ನಗರ ಬಿಜೆಪಿ ಶಾಸಕ ಮುನಿರತ್ನ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆ ಎಸೆದಿರುವ ಆರೋಪ ಕೇಳಿಬಂದಿದೆ. ಆರೋಪ ಪ್ರತ್ಯಾರೋಪದ ಹಿನ್ನೆಲೆ 2 ಕಡೆಯವರು ಸ್ಥಳದಲ್ಲಿ ಗಲಾಟೆ ನಡೆಸಿದ್ದಾರೆ.

ಕಾಂಗ್ರೆಸ್ ಕಾರ್ಯಕರ್ತರೇ ಮೊಟ್ಟೆ ಎಸೆದಿದ್ದಾರೆ ಎಂದು ಮುನಿರತ್ನ ಹಾಗೂ ಅವರ ಬೆಂಬಲಿಗರು ಆರೋಪಿಸಿದ್ದಾರೆ.ಘಟನೆ ಬಳಿಕ ಶಾಸಕ ಮುನಿರತ್ನ ಹಾಗೂ ಬೆಂಬಲಿಗರು ರಸ್ತೆಯಲ್ಲಿಯೇ ಕುಳಿತು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಕೂಡ ಸ್ಥಳಕ್ಕಾಗಮಿಸಿದ್ದು, ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಸುಳ್ಳು ಆರೋಪ ಮಾಡಲಾಗುತ್ತಿದೆ. ಮುನಿರತ್ನ ಬೆಂಬಲಿಗರೇ ಅವರ ಮೇಲೆ ಮೊಟ್ಟೆ ಎಸೆದು ಬಳಿಕ ಕಾಂಗ್ರೆಸ್ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. ಈ ವೇಳೆ ಕಾಂಗ್ರೆಸ್ ಹಾಗೂ ಮುನಿರತ್ನ ಬೆಂಬಲಿಗರ ನಡುವೆ ಗಲಾಟೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಾಜಪೇಯಿ ಜನ್ಮ ದಿನದ ಕಾರ್ಯಕ್ರಮಕ್ಕೆ ಮುನಿರತ್ನ ಕಾರಿನಲ್ಲಿ ತೆರಳುತ್ತಿದ್ದಾಗ  ಮೊಟ್ಟೆ ಎಸೆದಿರುವ ಆರೋಪ ಕೇಳಿಬಂದಿದೆ. ಕಂಠೀರವ ಸ್ಟುಡಿಯೋ ಬಳಿ ಮೊಟ್ಟೆ ಎಸೆಯಲಾಗಿದೆ ಎಂಬ ಆರೋಪ ಕೇಳಿಬಂದಿದೆ.ಇದರಿಂದ ಕೆರಳಿದ ಮುನಿರತ್ನ ಬೆಂಬಲಿಗರು ಧರಣಿ ಕುಳಿತು ಪ್ರತಿಭಟನೆ ನಡೆಸಿದ್ದಾರೆ. ಘಟನೆ ಸಂಬಂಧ ಹಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular