ಮಂಡ್ಯ: ಎಮ್ಮೆ ತೊಳೆಯುವ ವೇಳೆ ಬಾವಿಗೆ ಬಿದ್ದು ವೃದ್ಧ ದಂಪತಿ ಸಾವನ್ನಪ್ಪಿದ ಘಟನೆ ಕೆಆರ್ ಪೇಟೆ ತಾಲೂಕಿನ ಅರೆಬೊಪ್ಪನಹಳ್ಳಿಯಲ್ಲಿ ನಡೆದಿದೆ.
ಮಂಡ್ಯ ಜಿಲ್ಲೆ ಕೆಆರ್ ಪೇಟೆ ತಾಲೂಕಿನ ಅರೆಬೊಪ್ಪನಹಳ್ಳಿ ಗ್ರಾಮದ ಕಾಳೇಗೌಡ(70) ಮತ್ತು ವಸಂತಮ್ಮ(65) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಎಮ್ಮೆ ತೊಳೆಯಲು ತೆರೆದ ಬಾವಿ ಬಳಿಗೆ ದಂಪತಿ ಬಂದಿದ್ದರು. ಆಕಸ್ಮಿಕವಾಗಿ ವಸಂತಮ್ಮ ಬಾವಿಗೆ ಬಿದ್ದಿದ್ದಾರೆ. ಅವರನ್ನು ರಕ್ಷಿಸಲು ಹೋದ ಪತಿ ಕಾಳೇಗೌಡ ಕೂಡ ಸಾವನ್ನಪ್ಪಿದ್ದಾರೆ. ಇಬ್ಬರೂ ಬಾವಿಯಲ್ಲಿ ಮುಳುಗಿ ಮೃತಪಟ್ಟಿರುವ ಮಾಹಿತಿ ಗೊತ್ತಾಗಿದೆ. ಕೆಆರ್ ಪೇಟೆ ಟೌನ್ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.