ಕಲಬುರಗಿ: ಜಮೀನು ಕೆಲಸ ಮುಗಿಸಿ ಮನೆಗೆ ಬರುತ್ತಿದ್ದ ವೃದ್ಧನನ್ನು ಕೊಲೆ ಮಾಡಿದ ಘಟನೆ ಕಲಬುರಗಿ ತಾಲೂಕಿನ ಸೀತನೂರು ಗ್ರಾಮದ ಸೇತುವೆ ಬಳಿ ನಡೆದಿದೆ.
ತಲ್ವಾರ್ ನಿಂದ ಕೊಚ್ಚಿ ಶಿವರಾಯ ಮಾಲಿ ಪಾಟೀಲ(65) ಅವರನ್ನು ಹತ್ಯೆ ಮಾಡಲಾಗಿದೆ. ಅಪರಿಚಿತ ದುಷ್ಕರ್ಮಿಗಳು ಶಿವರಾಯ ಮಾಲಿ ಪಾಟೀಲ್ ಅವರನ್ನು ಕೊಲೆ ಮಾಡಿದ್ದಾರೆ. ಬೆಳಗ್ಗೆ ಜಮೀನು ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದಾಗ ಕೊಲೆ ಮಾಡಲಾಗಿದೆ. ಹಳೇ ದ್ವೇಷದ ಹಿನ್ನೆಲೆಯಲ್ಲಿ ಶಿವರಾಯ ಅವರನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಕಲಬುರಗಿ ನಗರ ಡಿಸಿಪಿ ಕನ್ನಿಕಾ ಸಿಖ್ರಿವಾಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಫರಹತಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.