HomeLatest NewsBREAKING: ಲೋಕಸಭೆ ಚುನಾವಣೆ ವೇಳೆ ಚುನಾವಣಾ ಆಯೋಗ ದುರ್ಬಳಕೆ, ಬಿಜೆಪಿ ‘ಮತಗಳ್ಳತನ’ ಅಕ್ರಮ ಬಹಿರಂಗ: ಸಿಎಂ...

BREAKING: ಲೋಕಸಭೆ ಚುನಾವಣೆ ವೇಳೆ ಚುನಾವಣಾ ಆಯೋಗ ದುರ್ಬಳಕೆ, ಬಿಜೆಪಿ ‘ಮತಗಳ್ಳತನ’ ಅಕ್ರಮ ಬಹಿರಂಗ: ಸಿಎಂ ಸಿದ್ಧರಾಮಯ್ಯ

ಲೋಕಸಭೆ ಚುನಾವಣೆ ವೇಳೆ ರಾಜ್ಯದಲ್ಲಿ ಮತಗಳ್ಳತನವಾಗಿದೆ ಎನ್ನುವ ರಾಹುಲ್ ಗಾಂಧಿ ಹೇಳಿಕೆಯನ್ನು ಸಂಪೂರ್ಣವಾಗಿ ಅನುಮೋದಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕರ್ನಾಟಕದಲ್ಲಿ ನಡೆದಿರುವ ಕಳೆದ ಲೋಕಸಭಾ ಚುನಾವಣೆಯ ಫಲಿತಾಂಶ ನಮಗೆ ಆಶ್ಚರ್ಯವನ್ನು ಉಂಟುಮಾಡಿದ್ದು ಮಾತ್ರವಲ್ಲ, ಹಲವಾರು ಬಗೆಯ ಅನುಮಾನಗಳನ್ನು ಕೂಡಾ ಹುಟ್ಟುಹಾಕಿತ್ತು. ಆ ಚುನಾವಣೆಯಲ್ಲಿ ಬಿಜೆಪಿ ಚುನಾವಣಾ ಆಯೋಗವನ್ನು ದುರ್ಬಳಕೆ ಮಾಡಿಕೊಂಡು ನಡೆಸಿರುವ ಅಕ್ರಮವೇ ಕಾಂಗ್ರೆಸ್ ಪಕ್ಷದ ಹಿನ್ನಡೆಗೆ ಕಾರಣ ಎನ್ನುವ ಸತ್ಯ ಈಗ ಬಯಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿರುವ ರಾಹುಲ್ ಗಾಂಧಿ ಅವರು ಚುನಾವಣಾ ಆಯೋಗ ನಡೆಸಿರುವ ಅಕ್ರಮಗಳ ದಾಸ್ತಾನನ್ನು ಒಂದೊಂದಾಗಿ ಬಯಲಿಗೆಳೆಯುತ್ತಿದ್ದು, ಕರ್ನಾಟಕದಲ್ಲಿ ನಡೆದಿರುವ ಚುನಾವಣಾ ಅಕ್ರಮಗಳ ಬಗ್ಗೆಯೂ ವಿವರಗಳನ್ನು ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕರ್ನಾಟಕದಲ್ಲಿ ಚುನಾವಣಾ ಆಯೋಗ ಅಕ್ರಮಗಳನ್ನು ನಡೆಸಿರುವುದಕ್ಕೆ ನೂರಕ್ಕೆ ನೂರರಷ್ಟು ಸಾಕ್ಷ್ಯಗಳಿವೆ ಎಂದು ರಾಹುಲ್ ಗಾಂಧಿ ಹೇಳಿರುವುದನ್ನು ನಾನು ಸಂಪೂರ್ಣವಾಗಿ ಅನುಮೋದಿಸುತ್ತೇನೆ. ರಾಜ್ಯದ ಹಲವಾರು ಕ್ಷೇತ್ರಗಳಲ್ಲಿ ಇದ್ದಕ್ಕಿದ್ದಂತೆಯೇ ಹೊಸ ಮತದಾರರ ಸೇರ್ಪಡೆಯಾಗಿರುವುದು ಮತ್ತು ಹಳೆಯ ಮತದಾರರ ಹೆಸರುಗಳು ರದ್ದಾಗಿರುವುದರ ಬಗ್ಗೆ ನಮ್ಮ ಅನೇಕ ಕಾರ್ಯಕರ್ತರು ದೂರುಗಳನ್ನು ನೀಡಿದ್ದರು.

ನರೇಂದ್ರ ಮೋದಿ ಅವರ ಚುನಾವಣಾ ಗೆಲುವುಗಳಿಗೆ ಅವರ ಜನಪ್ರಿಯತೆಯಾಗಲಿ, ಬಿಜೆಪಿ ಸರ್ಕಾರದ ಸಾಧನೆಗಳಾಗಲಿ ಕಾರಣ ಅಲ್ಲ. ಅದು ಚುನಾವಣಾ ಆಯೋಗದ ಮೂಲಕ ನಡೆಸಿದ ‘’ಮತಗಳ್ಳತನ’ಕಾರಣ ಎನ್ನುವ ಸತ್ಯ ಈಗ ಬಯಲಾಗುತ್ತಿದೆ.

ಕರ್ನಾಟಕದಲ್ಲಿ ನಡೆದಿರುವ ಚುನಾವಣಾ ಅಕ್ರಮಗಳ ಬಗ್ಗೆ ಏನು ಕ್ರಮಕೈಗೊಳ್ಳಬೇಕೆಂಬ ಬಗ್ಗೆ ರಾಹುಲ್ ಗಾಂಧಿಯವರು ಮತ್ತು ಎಐಸಿಸಿ ಅಧ್ಯ್ಕಕ್ಷರಾಗಿರುವ  ಮಲ್ಲಿಕಾರ್ಜುನ ಖರ್ಗೆಯವರ ಜೊತೆ ಸಮಾಲೋಚಿಸಿ, ನಾವು ತೀರ್ಮಾನ ಕೈಗೊಳ್ಳುತ್ತೇವೆ ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular