HomeLatest NewsBREAKING: ವಿದ್ಯುತ್ ಗ್ರಾಹಕರೇ ಗಮನಿಸಿ…! ರಾಜ್ಯದಲ್ಲಿ 2 ದಿನ ವಿದ್ಯುತ್ ಬಿಲ್ ಪಾವತಿ ಸೇರಿ ಆನ್ಲೈನ್...

BREAKING: ವಿದ್ಯುತ್ ಗ್ರಾಹಕರೇ ಗಮನಿಸಿ…! ರಾಜ್ಯದಲ್ಲಿ 2 ದಿನ ವಿದ್ಯುತ್ ಬಿಲ್ ಪಾವತಿ ಸೇರಿ ಆನ್ಲೈನ್ ಸೇವೆ ಇರಲ್ಲ

ಬೆಂಗಳೂರು:  ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯ ಉನ್ನತೀಕರಣ ಕಾರ್ಯ ಕೈಗೊಂಡಿರುವ ಹಿನ್ನೆಲೆಯಲ್ಲಿ ಎರಡು ದಿನ ಐದು ಎಸ್ಕಾಂಗಳ ವ್ಯಾಪ್ತಿಯಲ್ಲಿ ಆನ್ಲೈನ್ ಸೇವೆ ಅಲ್ಲಭ್ಯವಾಗಿರುತ್ತದೆ.

ಜುಲೈ 25ರಂದು ರಾತ್ರಿ 8.30 ರಿಂದ ಜುಲೈ 27ರಂದು ರಾತ್ರಿ 10 ಗಂಟೆಯವರೆಗೆ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಆನ್ಲೈನ್ ವಿದ್ಯುತ್ ಬಿಲ್ ಪಾವತಿ, ಹೆಸರು ಬದಲಾವಣೆ, ಜಕಾತಿ ಬದಲಾವಣೆ, ಹೊಸ ಸಂಪರ್ಕ ಸೇವೆ ಇರುವುದಿಲ್ಲ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿಲ್‌ ಪಾವತಿಗಾಗಿ ಬಳಸುವ ಎಲ್ಲಾ ಎಸ್ಕಾಂಗಳ ಜಾಲತಾಣ, ಬೆಸ್ಕಾಂ ಮಿತ್ರ ಮೊಬೈಲ್‌ ಆಪ್‌, ಬೆಂಗಳೂರು ಒನ್‌ ಹಾಗೂ ಕರ್ನಾಟಕ ಒನ್‌ ಕೌಂಟರ್‌ ಗಳಲ್ಲಿ ಎರಡು ದಿನ ಆನ್‌ ಲೈನ್‌ ಸೇವೆಗಳು ಲಭ್ಯವಿರುವುದಿಲ್ಲ. ಅಡಚಣೆಗಾಗಿ ಗ್ರಾಹಕರು ಸಹಕರಿಸುವಂತೆ ಕೋರಲಾಗಿದೆ.

ಬೆಸ್ಕಾಂ, ಸೆಸ್ಕ್‌, ಮೆಸ್ಕಾಂ, ಜೆಸ್ಕಾಂ, ಹೆಸ್ಕಾಂಗಳ ವಿವಿಧ ಉಪ ವಿಭಾಗಗಳ ವ್ಯಾಪ್ತಿಯಲ್ಲಿ ಎರಡು ದಿನ ಆನ್‌ ಲೈನ್‌ ಸೇವೆಗಳು ಲಭ್ಯವಿರುವುದಿಲ್ಲ ಎನ್ನಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular