ಪಂಜಾಬ್ನ ಶ್ರೀ ಮುಕ್ತಸರ್ ಸಾಹಿಬ್ನಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಶುಕ್ರವಾರ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ಐದು ಜನರು ಸಾವನ್ನಪ್ಪಿದ್ದು, ಸುಮಾರು 25 ಜನರು ಗಾಯಗೊಂಡಿದ್ದಾರೆ.
ಸ್ಫೋಟದ ನಂತರ ಎರಡು ಅಂತಸ್ತಿನ ಕಟ್ಟಡ ಕುಸಿದು ಬಿದ್ದಿದ್ದು, ಸ್ಥಳದಲ್ಲಿ ಹಲವಾರು ಕಾರ್ಮಿಕರು ಸಿಲುಕಿಕೊಂಡಿದ್ದಾರೆ.
ಶ್ರೀ ಮುಕ್ತಸರ್ ಸಾಹಿಬ್ನ ಸಿಂಘವಲಿ-ಕೋಟ್ಲಿ ರಸ್ತೆಯಲ್ಲಿರುವ ಎರಡು ಅಂತಸ್ತಿನ ಕಾರ್ಖಾನೆ ಘಟಕದಲ್ಲಿ ಈ ಘಟನೆ ಸಂಭವಿಸಿದೆ ಎಂದು ಲಂಬಿಯ ಉಪ ಪೊಲೀಸ್ ವರಿಷ್ಠಾಧಿಕಾರಿ ಜಸ್ಪಾಲ್ ಸಿಂಗ್ ಹೇಳಿದ್ದಾರೆ ಸ್ಫೋಟದ ಹಿಂದಿನ ಕಾರಣವನ್ನು ತನಿಖೆ ನಡೆಸಲಾಗುತ್ತಿದೆ ಎಂದು ಡಿಎಸ್ಪಿ ತಿಳಿಸಿದ್ದಾರೆ. ಸ್ಫೋಟದ ಬಗ್ಗೆ ಮಾಹಿತಿ ಪಡೆದ ಕೂಡಲೇ ಸ್ಥಳೀಯ ಪೊಲೀಸರು ಮತ್ತು ಆಡಳಿತದ ತಂಡ ಸ್ಥಳಕ್ಕೆ ಆಗಮಿಸಿತು. ಗಾಯಾಳುಗಳನ್ನು ಬಟಿಂಡಾದ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್) ಗೆ ಸ್ಥಳಾಂತರಿಸಲಾಯಿತು.

