BREAKING : ತಮಿಳುನಾಡಿನ ಮತ್ತೊಂದು ಪಟಾಕಿ ಕಾರ್ಖಾನೆಯಲ್ಲಿ ಸ್ಪೋಟ, ಓರ್ವ ಸಾವು

ತಮಿಳುನಾಡು : ಕಳೆದ ವಾರ ತಮಿಳುನಾಡಿನ ವಿರುಧುನಗರ ಜಿಲ್ಲೆಯ ಪಟಾಕಿ ಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ 10 ಜನರು ಸಾವನ್ನಪ್ಪಿದ ಕೆಲವು ದಿನಗಳ ನಂತರ ಜಿಲ್ಲೆಯ ಸತ್ತೂರು ಬಳಿಯ ಪಟಾಕಿ ಘಟಕದಲ್ಲಿ ಶನಿವಾರ ಸಂಭವಿಸಿದ ಮತ್ತೊಂದು ಸ್ಫೋಟದಲ್ಲಿ ಮತ್ತೋರ್ವ ಕಾರ್ಮಿಕ ಸಾವನ್ನಪ್ಪಿದ್ದಾನೆ.

ಪ್ರಾಥಮಿಕ ಮಾಹಿತಿಯ ಪ್ರಕಾರ ಅವಘಡದಲ್ಲಿ ಸುಮಾರು ಮೂರು ಕೊಠಡಿಗಳು ಹಾನಿಗೊಳಗಾಗಿವೆ. ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದೆ.

ಫೆಬ್ರವರಿ 18, 2024 ರಂದು ವೆಂಬಕೊಟ್ಟೈ ಬಳಿಯ ಪಟಾಕಿ ಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ಮಂದಿ ಮೃತಪಟ್ಟಿದ್ದರು. ಈ ಬೆನ್ನಲ್ಲೇ ಮತ್ತೊಂದು ಸ್ಪೋಟ ಸಂಭವಿಸಿದೆ. ರಾಜ್ಯ ಸರ್ಕಾರದ ಅಂಕಿಅಂಶಗಳ ಪ್ರಕಾರ, ವಿರುಧುನಗರ ಜಿಲ್ಲೆಯ ವಿವಿಧ ಪಟಾಕಿ ಘಟಕಗಳು ಮತ್ತು ಅಂಗಡಿಗಳಲ್ಲಿ ಸಂಭವಿಸಿದ ಸ್ಫೋಟಗಳಲ್ಲಿ ಕಳೆದ ಹತ್ತು ವರ್ಷಗಳಲ್ಲಿ ಕನಿಷ್ಠ 269 ಜನರು ಸಾವನ್ನಪ್ಪಿದ್ದಾರೆ.

ಸಾಂದರ್ಭಿಕ ಚಿತ್ರ

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read