ಮೈಸೂರು: ಮೈಸೂರು ಅರಮನೆಯ ಮುಂಭಾಗ ಹೀಲಿಯಂ ಗ್ಯಾಸ್ ಅವಘಡದಿಂದ ಓರ್ವ ಸಾವನ್ನಪ್ಪಿದ್ದು ಗಾಯಗೊಂಡ 4 ಮಕ್ಕಳ ಸ್ಥಿತಿ ಗಂಭೀರವಾಗಿದೆ.
ಮೈಸೂರು ಅರಮನೆಯ ಮುಂಭಾಗ ಬಲೂನ್ ಗಳಿಗೆ ಹೀಲಿಯಂ ಗ್ಯಾಸ್ ತುಂಬಿಸುವಾಗ ಸ್ಪೋಟ ಸಂಭವಿಸಿದ್ದು, ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಅವಘಡದಲ್ಲಿ ಗಾಯಗೊಂಡ 4 ಮಕ್ಕಳ ಸ್ಥಿತಿ ಗಂಭೀರವಾಗಿದ್ದು, ಗಾಯಾಳುಗಳನ್ನು ಸ್ಥಳೀಯರು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಸ್ಥಳಕ್ಕೆ ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್, ಕೃಷ್ಣರಾಜ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತೀವ್ರ ಸ್ಪೋಟದಿಂದ ಅರಮನೆ ಆವರಣದಲ್ಲಿ ಆತಂಕ ಉಂಟಾಗಿದೆ. ಅರಮನೆಯ ಜಯ ಮಾರ್ತಾಂಡ ದ್ವಾರದ ಬಳಿ ಘಟನೆ ನಡೆದಿದೆ. ಸ್ಪೋಟದ ತೀವ್ರತೆಗೆ ಸಿಲಿಂಡರ್ ಹಾಗೂ ವ್ಯಕ್ತಿಯ ದೇಹ ಛಿದ್ರವಾಗಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

