ಶಿವಮೊಗ್ಗ ಜಿಲ್ಲೆ ಸಾಗರದ ಆದಿಶಕ್ತಿ ನಗರದ ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡಿದ್ದು, ಮನೆಯ ಮಾಲೀಕ ವೆಂಕಟೇಶ್ ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಗೊಂಡ ವೆಂಕಟೇಶ್ ಅವರನ್ನು ಶಿವಮೊಗ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸಹಾಯಕ್ಕೆ ಹೋದ ಪಕ್ಕದ ಮನೆಯವರು ಕೂಡ ಗಾಯಗೊಂಡಿದ್ದಾರೆ. ಕಿರಣ್ ಕುಮಾರ್ ಮತ್ತು ಧರಣೇಶ್ ಎಂಬುವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಸಿಲಿಂಡರ್ ಜೋಡಿಸುವಾಗ ಘಟನೆ ನಡೆದಿದೆ. ಸಾಗರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.