ಬೆಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿದ್ದ ಕೇಸ್ ರದ್ದುಪಡಿಸುವಂತೆ ಬುರುಡೆ ಗ್ಯಾಂಗ್ ನಿಂದ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ.
ತಾವೇ ಹೋರಾಟ ಮಾಡಿ ಹಾಕಿಸಿದ್ದ ಕೇಸ್ ರದ್ದುಪಡಿಸುವಂತೆ ಹೈಕೋರ್ಟ್ ಮೊರೆ ಹೋಗಿದ್ದು, ಧರ್ಮಸ್ಥಳಕ್ಕೆ ಮಸಿ ಬಳಿದ ಕೇಸ್ ನಲ್ಲಿ ಬಂಧನದಿಂದ ಪಾರಾಗಲು ಯತ್ನ ನಡೆದಿದೆ. ಮಾಸ್ಕ್ ಮ್ಯಾನ್ ಚಿನ್ನಯ್ಯ ಇದೊಂದು ಷಡ್ಯಂತ್ರ ಎಂದು ಹೇಳಿದ್ದರಿಂದ ಸಂಕಷ್ಟದಲ್ಲಿ ಬುರುಡೆಗೆ ಗ್ಯಾಂಗ್ ಸಿಲುಕಿದೆ.
ಅಂತರರಾಷ್ಟ್ರೀಯ ಮಟ್ಟದಲ್ಲಿ ಧರ್ಮಸ್ಥಳ ವಿರುದ್ಧ ನಡೆದ ಅಪಪ್ರಚಾರ ಪ್ರಕರಣ ಇದಾಗಿದ್ದು, ಮಹೇಶ್ ಶೆಟ್ಟಿ ತಿಮರೋಡಿ, ಜಯಂತ್, ಗಿರೀಶ್ ಮಟ್ಟಣ್ಣನವರ್ ವಿಠ್ಠಲ್ ಗೌಡ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಇಂದು ಹೈಕೋರ್ಟ್ ನಲ್ಲಿ ಅರ್ಜಿಯ ವಿಚಾರಣೆ ನಡೆಯಲಿದೆ.
ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ನೇತೃತ್ವದ ಏಕಸದಸ್ಯ ಪೀಠದ ಮುಂದೆ ಗುರುವಾರ ಅರ್ಜಿ ವಿಚಾರಣೆ ನಡೆಯಲಿದೆ. ಧರ್ಮಸ್ಥಳಕ್ಕೆ ಮಸಿ ಬಳಿಯುವ ಪ್ರಯತ್ನವಾಗಿ ತಾವೇ ಹೋರಾಟ ಮಾಡಿ ಹಾಕಿದ್ದ ಪ್ರಕರಣವನ್ನು ರದ್ದುಪಡಿಸುವಂತೆ ಬುರುಡೆ ಗ್ಯಾಂಗ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿರುವುದು ಅಚ್ಚರಿ ಮೂಡಿಸಿದೆ.
ಮಾಸ್ಕ್ ಮ್ಯಾನ್ ಚಿನ್ನಯ್ಯ ತಪ್ಪೊಪ್ಪಿಕೊಂಡಿದ್ದರಿಂದ ಬುರುಡೆಗೆ ಗ್ಯಾಂಗ್ ಸಂಕಷ್ಟಕ್ಕೆ ಸಿಲುಕಿದೆ. ಸುಜಾತಾ ಭಟ್ ಪ್ರಕರಣದಲ್ಲಿ ಮುಖಭಂಗವಾಗಿರುವುದು, ಸುಳ್ಳು ದೂರು, ಸಾಕ್ಷಿ ಸೃಷ್ಟಿ ಹಿನ್ನೆಲೆಯಲ್ಲಿ ಬಂಧನದಿಂದ ತಪ್ಪಿಸಿಕೊಳ್ಳಲು ಪ್ರಕರಣ ರದ್ದು ಮಾಡುವಂತೆ ಹೈಕೋರ್ಟ್ ಮೊರೆ ಹೋಗಿದ್ದಾರೆ ಎನ್ನಲಾಗಿದೆ.

 
			 
		 
		 
		 
		 Loading ...
 Loading ... 
		 
		 
		