ರಾಮನಗರ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತ್ನಿಯನ್ನು ಕೊಲೆ ಮಾಡಿ ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರ ತಾಲೂಕಿನ ಹಾಗಲಹಳ್ಳಿಯಲ್ಲಿ ನಡೆದಿದೆ.
25 ವರ್ಷದ ಪತ್ನಿ ವತ್ಸಲಾ ಅವರನ್ನು ಕೊಲೆ ಮಾಡಿ ಪತಿ ನವೀನ್(35) ನೇಣಿಗೆ ಶರಣಾಗಿದ್ದಾರೆ. ರಾಮನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

