ಬೆಂಗಳೂರು : ಖ್ಯಾತ ನಿರೂಪಕಿ ಅನುಶ್ರೀ ಮದುವೆ ಫಿಕ್ಸ್ ಆಗಿರುವ ವಿಷಯ ನಿಮಗೆ ಗೊತ್ತೇ ಇದೆ. ಇದೀಗ ಬಂದ ಮಾಹಿತಿ ಪ್ರಕಾರ ಆಗಸ್ಟ್ 28 ರಂದು ಬೆಂಗಳೂರಿನ ರೆಸಾರ್ಟ್ ನಲ್ಲಿ ಅನುಶ್ರೀ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.
ಹೌದು. ಜೀ ಕನ್ನಡ ವಾಹಿನಿಯ ಖ್ಯಾತ ನಿರೂಪಕಿ ಅನುಶ್ರೀ ಮದುವೆ ಫಿಕ್ಸ್ ಆಗಿದ್ದು, ಆಗಸ್ಟ್ 28 ರಂದು ಹಸೆಮಣೆ ಏರಲಿದ್ದಾರೆ.ಕೊಡಗು ಮೂಲದ ರೋಷನ್ ಎಂಬುವವರ ಜೊತೆ ಅನುಶ್ರೀ ಮದುವೆ ಆಗಲಿದ್ದಾರೆ. ಬೆಂಗಳೂರು ಹೊರವಲಯದ ರೆಸಾರ್ಟ್ ನಲ್ಲಿ ಮದುವೆ ಕಾರ್ಯಕ್ರಮ ನೆರವೇರಲಿದೆ. ಬೆಳಗ್ಗೆ 10:56 ರ ಶುಭ ಮೂಹೂರ್ತದಲ್ಲಿ ಅನುಶ್ರೀ ರೋಷನ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ.
ಕೊಡಗು ಮೂಲದ ರೋಷನ್ ಎಂಬುವವರ ಜೊತೆ ಅನುಶ್ರೀ ಮದುವೆ ಆಗಲಿದ್ದಾರೆ. ಇತ್ತೀಚೆಗೆ ಅನುಶ್ರೀ ಹಾಗೂ ರೋಷನ್ ಒಟ್ಟಿಗೆ ಇರುವ ಫೋಟೋ ವೈರಲ್ ಆಗಿತ್ತು. ಅನುಶ್ರೀ ಮದುವೆ ಸೆಟ್ಟಾಯ್ತು ಅಂತ ಹಿಂದೆ ಸಿಕ್ಕಾಪಟ್ಟೆ ಸುದ್ದಿಗಳು ವೈರಲ್ ಆಗಿತ್ತು. ಹಲವು ವರ್ಷಗಳಿಂದ ಅನುಶ್ರೀ ಮದುವೆ ಯಾವಾಗ ಎಂದು ಅಭಿಮಾನಿಗಳು ಕೇಳುತ್ತಿದ್ದರು. ಅಂತೂ ಇಂತೂ ‘ಮಾತಿನ ಮಲ್ಲಿ’ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ .