BREAKING: RCB ಗೆಲುವಿನ ಸಂಭ್ರಮಾಚರಣೆ ವೇಳೆ ಅಪಘಾತದಲ್ಲಿ ಅಭಿಮಾನಿ ಸಾವು

ಶಿವಮೊಗ್ಗ: ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಫೈನಲ್‌ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ತಂಡವು ಪಂಜಾಬ್ ಕಿಂಗ್ಸ್ ತಂಡವನ್ನು ಆರು ರನ್‌ಗಳಿಂದ ಸೋಲಿಸುವ ಮೂಲಕ ಮೊದಲ ಬಾರಿಗೆ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಅನ್ನು ಗೆದ್ದುಕೊಂಡಿದೆ.

ಶಿವಮೊಗ್ಗದಲ್ಲಿ ಸಂಭ್ರಮಾಚರಣೆಯ ವೇಳೆ ಆರ್‌ಸಿಬಿ ಅಭಿಮಾನಿ ಸಾವನ್ನಪ್ಪಿದ್ದಾರೆ. ಬೈಕ್ ನಲ್ಲಿ ಸಂಭ್ರಮಾಚರಣೆ ನಡೆಸುವಾಗ ಅಪಘಾತ ಸಂಭವಿಸಿದೆ. ಎರಡು ಬೈಕ್ ಗಳು ಮುಖಾಮುಖಿ ಡಿಕ್ಕಿಯಾಗಿದ್ದು, ಯುವಕ ಮೃತಪಟ್ಟಿದ್ದಾನೆ. ಅಭಿ ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read