ಹಾವೇರಿ: ಸಾಲಬಾಧೆ ತಾಳಲಾರದೆ ರೈತ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜೋಯಿಸರಹಳ್ಳಿಯಲ್ಲಿ ನಡೆದಿದೆ.
49 ವರ್ಷದ ಉಮೇಶ ತಳವಾರ ಆತ್ಮಹತ್ಯೆ ಮಾಡಿಕೊಂಡವರು. ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ಜೋಯಿಸರಹಳ್ಳಿ ಗ್ರಾಮದಲ್ಲಿ ಆತ್ಮಹತ್ಯೆ ಉಮೇಶ ಮಾಡಿಕೊಂಡಿದ್ದಾರೆ. ಅವರು ಬ್ಯಾಂಕ್ ಸೇರಿದಂತೆ ಹಲವು ಕಡೆಗಳಲ್ಲಿ 8 ಲಕ್ಷ ರೂಪಾಯಿ ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ. ಹಲಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.