HomeKarnatakaBREAKING: ಕಾಡಾನೆ ದಾಳಿಗೆ ರೈತ ಬಲಿ: ಸುರಿಯುವ ಮಳೆಯಲ್ಲೇ ಶವವಿಟ್ಟು ಪ್ರತಿಭಟನೆ

BREAKING: ಕಾಡಾನೆ ದಾಳಿಗೆ ರೈತ ಬಲಿ: ಸುರಿಯುವ ಮಳೆಯಲ್ಲೇ ಶವವಿಟ್ಟು ಪ್ರತಿಭಟನೆ

ಹಾಸನ: ಕಣಗುಪ್ಪೆ ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ರೈತ ಸಾವನ್ನಪ್ಪಿದ್ದಾರೆ. ಹಾಸನ ಜಿಲ್ಲೆ ಬೇಲೂರು ತಾಲೂಕಿನ ಕಣಗುಪ್ಪೆ ಗ್ರಾಮದ ಬಳಿ ಘಟನೆ ನಡೆದಿದೆ.

ರೈತ ಧರ್ಮರಾಜು(50) ಮೃತಪಟ್ಟವರು ಎಂದು ಹೇಳಲಾಗಿದೆ. ಸಿದ್ದರಹಳ್ಳಿಯಿಂದ ತಮ್ಮ ಊರಿಗೆ ತೆರಳುವಾಗ ಆನೆ ದಾಳಿ ನಡೆಸಿದೆ. ಧರ್ಮರಾಜ್ ಅವರು ನಡೆದುಕೊಂಡು ಬರುತ್ತಿದ್ದಾಗ ಏಕಾಏಕಿ ಕಾಡಾನೆ ದಾಳಿ ನಡೆಸಿದೆ. ಸ್ಥಳಕ್ಕೆ ಪೊಲೀಸರು, ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಪ್ರತಿಭಟನೆ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಣಗುಪ್ಪೆ ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಮೃತಪಟ್ಟ ಧರ್ಮರಾಜು ಮೃತದೇಹ ಮೇಲೆತ್ತಲು ಬಿಡದೆ ಪ್ರತಿಭಟನೆ ನಡೆಸಲಾಗಿದೆ. ಸುರಿಯುತ್ತಿರುವ ಮಳೆಯಲ್ಲಿಯೇ ಧರ್ಮರಾಜು ಶವವಿಟ್ಟು ಪ್ರತಿಭಟನೆ ನಡೆಸಲಾಗಿದೆ. ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಬರುವಂತೆ ಒತ್ತಾಯಿಸಲಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವರು ಬರುವವರೆಗೂ ಶವ ಎತ್ತುವುದಿಲ್ಲ ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದಿದ್ದಾರೆ.

ಸಿದ್ದೆಹಳ್ಳಿ ಗ್ರಾಮದ ಬಳಿ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಗಿದೆ. ರಸ್ತೆ ತಡೆ ಹಿನ್ನೆಲೆಯಲ್ಲಿ ಮೂಡಿಗೆರೆ- ಬೇಲೂರು ಸಂಪರ್ಕ ಕಡಿತವಾಗಿದೆ. ರಸ್ತೆಯಲ್ಲಿ ಟೈಯರ್ ಗೆ ಬೆಂಕಿ ಹಚ್ಚಿ ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ. ಸ್ಥಳಕ್ಕೆ ಉಸ್ತುವಾರಿ ಸಚಿವರು ಬರಬೇಕು ಎಂದು ಆಗ್ರಹಿಸಿದ್ದಾರೆ. ಅರಣ್ಯ ಇಲಾಖೆ, ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸರಿಂದ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular