ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ರೈತರೊಬ್ಬರು ಸಾವನ್ನಪ್ಪಿದ್ದಾರೆ. ಕಳೆದ ನಾಲ್ಕು ದಿನದ ಅವಧಿಯಲ್ಲಿ ಇಬ್ಬರು ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ.
ರೈತ ಸುಬ್ಬೇಗೌಡ(55) ಮೃತಪಟ್ಟವರು ಎಂದು ಹೇಳಲಾಗಿದೆ. ಕಾಫಿ ತೋಟದ ಕೆಲಸ ಮುಗಿಸಿ ಮನೆಗೆ ಬರುತ್ತಿದ್ದ ವೇಳೆಯಲ್ಲಿ ಅವರ ಮೇಲೆ ಕಾಡಾನೆ ದಾಳಿ ಮಾಡಿದ್ದು, ಆನೆ ದಾಳಿಯಿಂದ ರೈತ ಸುಬ್ಬೆಗೌಡ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಚಿಕ್ಕಮಗಳೂರು ಜಿಲ್ಲೆ ಕೊಪ್ಪ ಅರಣ್ಯ ವಲಯ ವ್ಯಾಪ್ತಿಯ ಅಂಡವಾನೆ ಗ್ರಾಮದಲ್ಲಿ ಘಟನೆ ನಡೆದಿದೆ. ಬಾಳೆಹೊನ್ನೂರು ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
ಕಳೆದ ಗುರುವಾರವಷ್ಟೇ ಕಾರ್ಮಿಕ ಮಹಿಳೆ ಅನಿತಾ ಅವರನ್ನು ಕಾಡಾನೆ ಬಲಿ ಪಡೆದಿತ್ತು. ನಾಲ್ಕು ದಿನದ ಅಂತರದಲ್ಲಿ ಕಾಡಾನೆ ದಾಳಿಯಿಂದ ಮತ್ತೊಬ್ಬರು ಸಾವನ್ನಪ್ಪಿದ್ದಾರೆ.