ಬೆಂಗಳೂರು: ಬೆಂಗಳೂರು ದಕ್ಷಿಣ ಜಿಲ್ಲೆ ದುನ್ನಸಂದ್ರದಲ್ಲಿ ಕಾಡಾನೆ ದಾಳಿಗೆ ರೈತ ಬಲಿಯಾಗಿದ್ದಾರೆ. ದುಂಡಮಾದ(50) ಮೃತಪಟ್ಟ ರೈತ ಎಂದು ಹೇಳಲಾಗಿದೆ.
ಬೆಂಗಳೂರು ದಕ್ಷಿಣ ಜಿಲ್ಲೆ ಹಾರೋಹಳ್ಳಿ ತಾಲೂಕಿನ ದುನ್ನಸಂದ್ರದಲ್ಲಿ ಘಟನೆ ನಡೆದಿದೆ. ಜಮೀನಿನಲ್ಲಿ ನೀರು ಹಾಯಿಸಲು ತೆರಳಿದ್ದ ರೈತ ದುಂಡಮಾದ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ಜಮೀನಿಗೆ ತೆರಳಿ ನೋಡಿದಾಗ ಆನೆ ದಾಳಿಯಿಂದ ರೈತ ಮೃತಪಟ್ಟಿರುವುದು ಕಂಡು ಬಂದಿದೆ.
ಬನ್ನೇರುಘಟ್ಟ ಅರಣ್ಯ ಪ್ರದೇಶದಿಂದ ಬಂದಿರುವ ಕಾಡಾನೆ ದಾಳಿ ಮಾಡಿದೆ. ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾರೋಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

